ಕಾರವಾರ: ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಜುಲೈ 13 ರಂದು ಹಮ್ಮಿಕೊಳ್ಳಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಸಿವಿಲ್, ಕ್ರಿಮಿನಲ್, ಸಾಲ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಅಪಘಾಟ ಪರಿಹಾರ, ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಹಾಗೂ ಇತರೆ ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.