ಮುಂಡಗೋಡ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ ವತಿಯಿಂದ ಮುಂಡಗೋಡ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪರಿಸರ ಅಧಿಕಾರಿ ಬಿ,ಕೆ ಸಂತೋಷ್, ಉಪ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಚಂದ್ರಶೇಖರ್ ಬಿ, ಸಿಎಓ ಕುಮಾರ ನಾಯ್ಕ, ಕಿರಿಯ ಆರೋಗ್ಯ ನಿರೀಕ್ಷಕ ವಿವೇಕ ಪಾಟೀಲ್ ಒಳಗೊಂಡ ತಂಡ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ದಾಸ್ತಾನು ಮಾಡಿರುವ ಮತ್ತು ಬಳಸುತ್ತಿರುವ ಅಂಗಡಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಪ್ಲಾಸ್ಟಿಕ್ ಸ್ಟಾç, ಕಪ್ ಮತ್ತು ಕ್ಯಾರಿಬ್ಯಾಗ್ ಇತ್ಯಾದಿ ಸೇರಿದಂತೆ 200 ಕೆಜಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂ.1200 ದಂಡವನ್ನು ಅಂಗಡಿ ಮಾಲೀಕರಿಗೆ ವಿಧಿಸಿ, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಹಾಗೂ ಬಟ್ಟೆ ಚೀಲಗಳನ್ನು ಬಳಸುವಂತೆ ಜಾಗೃತಿ ಮೂಡಿಸಲಾಯಿತು.