ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಬಾಲಕಿಯರ ಬಾಲಮಂದಿರ ಮತ್ತು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಇರುವ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ ಕ್ರಾಫ್ಟ್, ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಪಾಠ ಮಾಡಲು ಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜೂನ್ 15 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶ್ರೀಮತಿ ಉಮಾ ನೇತಲಕರ ಕಟ್ಟಡ, ಹಬ್ಬುವಾಡಾ ರಸ್ತೆ, ಕಾರವಾರ ಇವರಿಗೆ ಅರ್ಜಿ ಸಲ್ಲಿಸಬೇಕು.
ಷರತ್ತುಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ದೂ.ಸಂ:Tel:+9108382220182 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
