ಸಿದ್ದಾಪುರ: ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಾನಸೂರಿನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಗಾಂಧಿ ವಸತಿ ಶಾಲಾ ಸಂಕೀರ್ಣದ ನೂತನ ಕಟ್ಟಡಗಳ ಕಾಮಗಾರಿ ಪ್ರಗತಿ ಪರಿಶೀಲಿಸಿದರು.
ಶಾಲಾ ಕಟ್ಟಡ ಜೊತೆ, ಬಾಲಕರ ವಸತಿ ನಿಲಯ, ಬಾಲಕಿಯರ ವಸತಿ ನಿಲಯ, ಅಡುಗೆ ಕೋಣೆ, ವಿದ್ಯಾರ್ಥಿಗಳ ಭೋಜನಾಲಯ, ಪ್ರಾಚಾರ್ಯರ, ಬೋಧಕ ಬೋಧಕೇತರ ಸಿಬ್ಬಂದಿಗಳ ವಸತಿ ಗೃಹಗಳನ್ನು ವೀಕ್ಷಿಸಿದರು. ನೀರು ಸರಬರಾಜು ವ್ಯವಸ್ಥೆ, ಒಳಚರಂಡಿ ಸಂಸ್ಕಾರ ಘಟಕ, ನೀರಿನ ಸಂಗ್ರಹ ಘಟಕ ಮತ್ತು ಆಟದ ಮೈದಾನ ವೀಕ್ಷಿಸಿದ ಸಲಹೆ ಸೂಚನೆ ನೀಡಿದರು. ಈ ವೇಳೆ ಎಸ್.ಕೆ.ಭಾಗವತ, ತಾಲೂಕಿನ ಅಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.