• Slide
    Slide
    Slide
    previous arrow
    next arrow
  • ಧಾರ್ಮಿಕ ಕಟ್ಟಡ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ; ಮಸೂದೆ ಮಂಡನೆ

    300x250 AD

    ಬೆಂಗಳೂರು: ಸರ್ಕಾರದ ನಿಯಮಕ್ಕೆ ಒಳಪಟ್ಟ ರಾಜ್ಯದ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಉಳಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಸೋಮವಾರ ಮಸೂದೆ ಮಂಡನೆ ಮಾಡಿದೆ.

    ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯರ ಜೊತೆ ಸಭೆ ನಡೆಸಿ, ಧಾರ್ಮಿಕ ಕಟ್ಟಡಗಳ ರಕ್ಷಣೆಗೆ ಸಂಬಂಧಿಸಿದಂತೆ ಮಸೂದೆ ಮಂಡನೆ ಮಾಡಲು ತೀರ್ಮಾನ ತೆಗೆದುಕೊಂಡಿದ್ದರು. ಈ ಮಸೂದೆಯನ್ನು ನಿನ್ನೆಯಷ್ಟೇ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಉಭಯ ಸದನಗಳಲ್ಲಿಯೂ ಈ ಮಸೂದೆಗೆ ಸಂಬಂಧಿಸಿದಂತೆ ಚರ್ಚೆ ನಡೆಯಬೇಕಿದೆ.

    300x250 AD

    ಈ ಮಸೂದೆಯಲ್ಲಿ, ರಾಜ್ಯದಲ್ಲಿರುವ ಎಲ್ಲ ಧಾರ್ಮಿಕ ಕಟ್ಟಡಗಳನ್ನು ರಕ್ಷಣೆ ಮಾಡಲಾಗುತ್ತದೆ. ಆದರೆ ಇನ್ನು ಮುಂದಿನ ದಿನಗಳಲ್ಲಿ ಅನಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಾಣ ಮಾಡುವುದಕ್ಕೆ ಈ ಮಸೂದೆಯಲ್ಲಿ ನಿರ್ಬಂಧ ಹೇರಲಾಗಿದೆ. ಸರ್ಕಾರದ ನಿಯಮಗಳಿಗೆ ಒಳಪಟ್ಟು ಇರುವ ಅನಧಿಕೃತ ನಿರ್ಮಾಣದ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವಂತಿಲ್ಲ. ಆದರೆ ಸರ್ಕಾರದ ನಿಯಮಗಳಿಗೊಳಪಡದ ಕಟ್ಟಡಗಳನೀ ತೆರವು ಮಾಡಬಹುದು ಎಂಬುದಾಗಿಯೂ ಇದರಲ್ಲಿ ತಿಳಿಸಲಾಗಿದೆ.

    ಈ ವ್ಯಾಪ್ತಿಗೆ ದೇವಸ್ಥಾನಗಳು, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರಗಳು ಸೇರಿದಂತೆ ಎಲ್ಲಾ ಧರ್ಮಗಳಿಗೆ ಸಂಬಂಧಿಸಿದಂತೆ ಇರುವ ಕಟ್ಟಡಗಳು ಬರುತ್ತದೆ. ಇವುಗಳು ಸಾರ್ವಜನಿಕ ಪ್ರದೇಶದಲ್ಲಿ ಸರ್ಕಾರದ ಅನುಮತಿ ಪಡೆಯದೆಯೇ ನಿರ್ಮಾಣವಾಗಿದ್ದರೂ ಸಹ ಅವುಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಮಸೂದೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top