ಶಿರಸಿ: ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯಲ್ಲಿದ್ದ ಎಮ್ಮೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಸ್ಥಳೀಯರು ಸೇರಿ ರಕ್ಷಣೆ ಮಾಡಿದ ಘಟನೆ ತಾಲೂಕಿನ ಬಿಳಗಿ ಸಮೀಪದ ನೆಲೆಗುತ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪುಟ್ಟಪ್ಪ ವಾಲ್ಮೀಕಿ ಅವರ ಜಮೀನಿನ ಬಾವಿಯಲ್ಲಿ ಯಾರದೋ ಎಮ್ಮೆ ಕಾಲು ಜಾರಿ ಬಿದ್ದಿತ್ತು. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬಾವಿಯಲ್ಲಿದ್ದ ಎಮ್ಮೆಯನ್ನು ಸ್ಥಳೀಯರ ಸಹಕಾರದೊಂದಿಗೆ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಿಸಿದರು.ಅಗ್ನಿಶಾಮಕ ದಳದ ಈಶ್ವರ್ ನಾಯ್ಕ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.