Slide
Slide
Slide
previous arrow
next arrow

ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಿ ; ವಸಂತ ರೆಡ್ಡಿ

300x250 AD

ಶಿರಸಿ: ಜಿಲ್ಲೆಯಲ್ಲಿ ಸಂಪದ್ಭರಿತವಾದ ಅರಣ್ಯ, ಪ್ರವಾಸಿ ತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಅರಣ್ಯ ಮತ್ತು ಕಾಡು ಪ್ರಾಣಿಗಳಿಗೆ ಧಕ್ಕೆಯಾಗದಂತೆ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗಬೇಕು ಎಂದು ಶಿರಸಿ, ಕೆನರಾ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಹೇಳಿದರು.

ಅವರು ಗುರುವಾರ ಸಾಮಾಜಿಕ ಅರಣ್ಯವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಯಲ್ಲಿ ಅರಣ್ಯ ಇಲಾಖೆ ಹಾಗೂ ಪಂಚಾಯತ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ನಡುವೆ ಸಮನ್ವಯತೆಯನ್ನು ಸಾಧಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಆಯಾ ಪ್ರದೇಶಕ್ಕೆ ಅನುಗುಣವಾಗಿ ಪ್ರತಿ ತಾಲೂಕಿಗೆ ಒಂದರಂತೆ ಪರಿಸರ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅರಣ್ಯ ಪ್ರದೇಶದಲ್ಲಿ ನೆಡುತೋಪು, ಇಂಗು ಗುಂಡಿ ನಿರ್ಮಾಣಕ್ಕೆ ಮಾತ್ರ ಸೀಮಿತವಾಗದೇ ಅರಣ್ಯ, ವನ್ಯಜೀವಿ ಮತ್ತು ಪರಿಸರ ಪ್ರವಾಸೋದ್ಯಮ ಅಧಾರಿತ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಸ್ಥಳೀಯರಿಗೆ ಮನರೇಗಾ ಯೋಜನೆ ಅಡಿ ಉದ್ಯೋಗ ಕಲ್ಪಿಸಲು ನೆರವಾಗಬೇಕು ಎಂದರು.
ಜಿಲ್ಲಾ ಪಂಚಾಯತ ಸಿಇಓ ಈಶ್ವರ್ ಕಾಂದೂ ಮಾತನಾಡಿ, ಯೋಜನೆಯ ಪ್ರಗತಿಗೆ ತಳಮಟ್ಟದಲ್ಲಿ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳು ಪರಸ್ಪರ ಸಹಕಾರ ನೀಡಬೇಕು. ಗ್ರಾಮ ಪಂಚಾಯತ್ ಮತ್ತು ತಾಲೂಕು ಮಟ್ಟದಲ್ಲಿ ನಡೆಯುವ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗಿ, ಸ್ಥಳೀಯ ಬೇಡಿಕೆಗೆ ಅನುಗುಣವಾಗಿ ಕ್ರೀಯಾ ಯೋಜನೆ ರೂಪಿಸಬೇಕು ಮತ್ತು ನಿಗದಿತ ಗುರಿ ಸಾಧಿಸಲು ಕಾರ್ಯಪ್ರವರ್ತರಾಗಬೇಕು ಎಂದು ತಿಳಿಸಿದರು. ಇದರೊಂದಿಗೆ ಜಿಲ್ಲೆಯಲ್ಲಿ ಮನರೇಗಾ ಯೋಜನೆಯ ಧ್ಯೇಯೋದ್ದೇಶಗಳನ್ನು ಈಡೇರಿಸುವ ಸಲುವಾಗಿ ಅರಣ್ಯ ಇಲಾಖೆ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳು, ಮಾನವ ದಿನಗಳ ಸೃಜನೆ, ಆರ್ಥಿಕ ಪ್ರಗತಿ, ಗುರಿ ಸಾಧನೆ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ತಾಂತ್ರಿಕ ವಿಷಯಕ್ಕೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆದು, ಅಧಿಕಾರಿಗಳ ನಡುವೆ ಸೂಕ್ತ ಸಲಹೆ ಸೂಚನೆಗಳು ರವಾನೆಯಾದವು.
ಸಭೆಯಲ್ಲಿ ಸಾಮಾಜಿಕ ಅರಣ್ಯವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ನಾವಿ, ಜಿ.ಪಂ. ಯೋಜನಾ ನಿರ್ದೇಶಕ ಕರೀಂ ಅಸಾದಿ, ಅರಣ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪ್ರಾದೇಶಿಕ ಅರಣ್ಯ ವಿಭಾಗಗಳ, ವನ್ಯ ಜೀವಿ ವಿಭಾಗದ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರು, ವಲಯ ಅರಣ್ಯಾಧಿಕಾರಿಗಳು, ಅರಣ್ಯ ಇಲಾಖೆ ಮತ್ತು ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top