ಜೊಯಿಡಾ: ಲೋಕಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆಯಾಗಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿರುವ ಕಾರಣ ತಾಲ್ಲೂಕಿನಲ್ಲಿ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರ ಸಂತೋಷ ಮುಗಿಲು ಮುಟ್ಟಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷ ಅಜಿತ್ ಥೋರವತ್ ಹೇಳಿಕೆ ನೀಡಿ ಕಾರ್ಯಕರ್ತರ ಅಭಿಪ್ರಾಯವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ.
2008ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದಾಗ ತಾಲೂಕಿಗೆ ಭೇಟಿ ನೀಡಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಅದರಿಂದಾಗಿ ತಾಲ್ಲೂಕಿನಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಕಾರಣವಾಯಿತು. ಹಳಿಯಾಳದಲ್ಲಿ ರೈತರಿಗೆ ಸಕ್ಕರೆ ಕಾರ್ಖಾನೆ ನೀಡಿದ್ದಾರೆ. ಈಗ ತಾಲೂಕಿನ ಜನತೆಗೆ ಉದ್ಯೋಗಕ್ಕೆ ಹೊರ ರಾಜ್ಯ ಹೊರ ಜಿಲ್ಲೆಗಳಿಗೆ ಹೋಗುತ್ತಿದ್ದಾರೆ. ಅದನ್ನು ತಡೆಗಟ್ಟಿ ತಾಲೂಕನ್ನು ಸದೃಢ ಮಾಡಲು ರಾಮನಗರದಲ್ಲಿ ಒಂದು ಕೈಗಾರಿಕೆ ಪ್ರಾರಂಭಿಸಬೇಕೆಂದು ಕಾರ್ಯಕರ್ತರ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಮನಗರದಲ್ಲಿ ಯಾವ ಸರಕಾರವೂ ಕೈಗಾರಿಕೆಯನ್ನು ಆರಂಭಿಸಿಲ್ಲ. ಗೋವಾ , ಬೆಳಗಾವಿ , ಹುಬ್ಬಳ್ಳಿಗೆ ಸಮೀಪ ಇರುವ ಇಲ್ಲಿ ಕೈಗಾರಿಕೆ ಆರಂಭವಾದರೆ, ಎಲ್ಲ ರೀತಿಯಿಂದಲೂ ಅಭಿವೃದ್ಧಿ ದೃಷ್ಟಿಯಿಂದಲೂ ಅನುಕೂಲವಾಗುತ್ತದೆ ಎಂದು ಜೆ.ಡಿ.ಎಸ್ ಅಧ್ಯಕ್ಷ ಅಜಿತ್ ಥೋರವತ್ ಕುಮಾರಸ್ವಾಮಿಯವರಿಗೆ ಮನವಿ ಮಾಡಿರುತ್ತಾರೆ.