ಸಿದ್ದಾಪುರ : ಸಾಲದ ಬಾಧೆಯಿಂದ ಬಳಲುತ್ತಿದ್ದ ವ್ಯಕ್ತಿ ಓರ್ವ ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಘಟನೆ ನಡೆದಿದೆ. ಬಾಲಚಂದ್ರ ರಾಮ ಭಟ್ಟ ( 68) ಬಳಗುಳಿ ಮೃತ ವ್ಯಕ್ತಿಯಾಗಿದ್ದಾನೆ.
ಈತನು ಬಿದ್ರಕಾನ ಸೇವಾ ಸಹಕಾರಿ ಸಂಘದಲ್ಲಿ ಕೃಷಿ ಚಟುವಟಿಕೆಗೆ ಸುಮಾರು 4 ಲಕ್ಷ ರೂ.ಗು ಹೆಚ್ಚಿನ ಸಾಲ ಮಾಡಿ ಸಾಲ ತೀರಿಸಲಾಗದೆ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಶನಿವಾರ ಮನೆ ಹತ್ತಿರ ವಿಷ ಸೇವಿಸಿ ಮನೆಗೆ ಬಂದು ವಾಂತಿ ಮಾಡಿಕೊಳ್ಳುತ್ತಿರುವಾಗ ಮನೆಯಲ್ಲಿ ಔಷಧಿ ಮಾಡಿ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ರವಿವಾರ ಬೆಳಗಿನ ಜಾವ ಮೃತಪಟ್ಟಿರುವುದಾಗಿ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು
![](https://euttarakannada.in/wp-content/uploads/2021/08/euk-logo-1-640x438.jpg?v=1628473623)