ಭಟ್ಕಳ: ಶಂಕಿತ ಉಗ್ರನಿಗಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಿಂದ(ATS) ಭಟ್ಕಳದಲ್ಲಿ ಶೋಧ ನಡೆಸಲಾಗಿದೆ. ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ್ ಎಂಬಾತನಿಗಾಗಿ ಶೋಧ ನಡೆಸಲಾಗಿದೆ. ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಯಾಗಿರುವ ಕಬೀರ್ ಸುಲ್ತಾನ್, ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದಾನೆ. ಆತನನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಮಹಾರಾಷ್ಟ್ರ ಕೋರ್ಟ್ ಸೂಚನೆ ಹಿನ್ನೆಲೆ ಎಟಿಎಸ್ ತಂಡ ಆಗಮಿಸಿದೆ.
ಭಟ್ಕಳದಲ್ಲಿನ ಶಂಕಿತ ಉಗ್ರನ ನಿವಾಸಕ್ಕೆ ATS ಅಧಿಕಾರಿಗಳು ನೋಟಿಸ್ ಅಂಟಿಸಿದ್ದು, ಶಂಕಿತನ ಬಂಧನಕ್ಕೆ ಜಿಲ್ಲೆಯ ಪೊಲೀಸರ ಸಹಕಾರ ಕೋರಿದ್ದಾರೆ.