Slide
Slide
Slide
previous arrow
next arrow

ಸುಂಕತ್ತಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

300x250 AD

ಸಿದ್ದಾಪುರ: ತಾಲೂಕಿನ ಬೇಡ್ಕಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರೋವರ್ಸ್ ಘಟಕದಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸುಂಕತ್ತಿಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿದ್ದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಮ್.ಎಚ್.ನಾಯ್ಕ ಇವರು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಬುನಾದಿ ಎಂಬುದು ಸಾಮಾನ್ಯವಾಗಿ ನಂಬಿಕೆ. ಜೀವನವು ಅಭಿವೃದ್ಧಿಯನ್ನು ಆಧರಿಸಿದೆ. ಅಭಿವೃದ್ಧಿ ಹಾಗೂ ಬೆಳೆಯುವುದು ಜೀವನ. ನಾವು ಈ ದೃಷ್ಟಿಕೋನವನ್ನು ಶಿಕ್ಷಣದ ದೃಷ್ಟಿಕೋನದಲ್ಲಿ ವಿವರಿಸಿದರೆ, ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿದೆ ಎಂದು ನಾವು ಸಂಕ್ಷಿಪ್ತಗೊಳಿಸಬಹುದು. ಹೀಗಾಗಿ, ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಲ್ಲದೆ ಬೇರೇನೂ ಅಲ್ಲ. ಶಿಕ್ಷಣವು ಮನುಷ್ಯನನ್ನು ರೂಪಿಸುವ ಪ್ರಕ್ರಿಯೆಯಾಗಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಅಗತ್ಯ ಎಂದು ಹೇಳಿ ಇಂತಹ ಉಚಿತ ನೋಟ್ ಪುಸ್ತಕಗಳ ವಿತರಣೆಯಿಂದ ವಿದ್ಯಾರ್ಥಿಗಳ ಮನಸ್ಥೈರ್ಯ ಹೆಚ್ಚಲಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಸತೀಶ ನಾಯ್ಕ ಮಾತನಾಡುತ್ತ ಸಾಮಾಜಿಕ, ವೈಯಕ್ತಿಕ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಶಿಕ್ಷಣವು ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಇದು ಔಷಧಿಯಂತಿದೆ, ಇದು ಬಹುತೇಕ ಎಲ್ಲಾ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ಶಿಕ್ಷಣ ಪಡೆಯುವುದೆಂದರೆ ನಮಗೆ ಉದ್ಯೋಗ ಸಿಗುವುದಷ್ಟೇ ಅಲ್ಲ, ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸುವುದು, ಆರೋಗ್ಯವಂತರಾಗಿ ಮತ್ತು ಸದೃಢರಾಗಿರುವುದು, ಶುಚಿತ್ವವನ್ನು ಕಾಪಾಡಿಕೊಳ್ಳುವುದು, ಸದಾ ಸಂತೋಷವಾಗಿರುವುದು, ಎಲ್ಲರನ್ನೂ ಚೆನ್ನಾಗಿ ನಡೆಸಿಕೊಳ್ಳುವುದು, ಜೀವನದ ಎಲ್ಲಾ ಸವಾಲುಗಳನ್ನು ಎದುರಿಸಬಹುದು ಎಂದು ಹೇಳಿದರು.

300x250 AD

ರೋವರ್ಸ್ ಘಟಕದ ಸಂಚಾಲಕರಾದ  ಜೆ.ಎಸ್.ಶಾಸ್ತ್ರಿ ಪ್ರಾಸ್ಥಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.  ಎನ್.ಎಸ್.ಎಸ್ ಸಂಚಾಲಕರಾದ ಅರುಣ್‌ಪ್ರಸಾದ್ ಎಂ.ಎಸ್ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಎಂ.ವಿ.ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕರು, ಭಾಸ್ಕರ ನಾಯ್ಕ, ಸಿ.ಆರ್.ಪಿ., ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಯಾನಂದ ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಆದ ಶ್ರೀಮತಿ ಲಲಿತ ಜಿ.ಹೆಗಡೆ,  ಸಹ ಶಿಕ್ಷಕಿ ಶ್ರೀಮತಿ ಮಹಾಲಕ್ಮಿ ಹೆಗಡೆ ಎಸ್.ಡಿ.ಎಂ.ಸಿ ಸದಸ್ಯರು, ಉರಿನ ನಾಗರಿಕರು ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.

Share This
300x250 AD
300x250 AD
300x250 AD
Back to top