ಶಿರಸಿ: 2023-24ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಸಾಪ ಶಿರಸಿ ಘಟಕ ಆಶ್ರಯ ಅಭಿನಂದನಾ ಕಾರ್ಯಕ್ರಮ ಜೂ.25 ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ನಗರದ ನೆಮ್ಮದಿ ರಂಗಧಾಮದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ ಉಧ್ಘಾಟಿಸಲಿದ್ದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಶಿರಸಿ ತಾಲೂಕಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ, ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎನ್.ಹೊಸ್ಮನಿ,ಶಿರಸಿ ಶೈಕ್ಷಣಿಕ ಜಿಲ್ಲೆ ಉಪ ನಿರ್ದೇಶಕ ಬಸವರಾಜ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ ಹಾಗೂ ಉ.ಕ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಡಾ.ವೆಂಕಟೇಶ್ ನಾಯ್ಕ ಉಪಸ್ಥಿತರಿರಲಿದ್ದಾರೆ ಎಂದು ಕಸಾಪ ಶಿರಸಿ ತಾಲೂಕಾ ಘಟಕದ ಗೌರವ ಕೋಶಾಧ್ಯಕ್ಷ ವಿ.ಆರ್ ಹೆಗಡೆ ಮತ್ತಿಘಟ್ಟಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶಿರಸಿ ತಾಲ್ಲೂಕಿನಲ್ಲಿ 166ಮಕ್ಕಳು ಕನ್ನಡದಲ್ಲಿ 100ಕ್ಕೆ 100ರಷ್ಟು ಅಂಕ ಪಡೆದವರಿದ್ದಾರೆ.ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಅಭಿನಂದನಾ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ನಡೆಸಿಕೊಂಡು ಬರಲಾಗುತ್ತಿದೆ. ವಿದ್ಯಾರ್ಥಿಗಳು ಒಮ್ಮೆ ಉನ್ನತ ಶಿಕ್ಷಣಕ್ಕೆ ಬೇರೆಕಡೆ ತೆರಳಿದ್ದರೆ ಅವರ ಪಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅಭಿನಂದನೆಯನ್ನು ಸ್ವೀಕರಿಸಬೇಕು.– ಜಿ.ಸುಬ್ರಾಯ ಭಟ್ ಬಕ್ಕಳ. ಕಸಾಪ ಶಿರಸಿ ತಾಲೂಕಾಧ್ಯಕ್ಷ.