ಶಿರಸಿ: ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಶಿರಸಿ ನಗರ ಪೊಲೀಸರು ವಿನೂತನ ಪೊಸ್ಟರ್ ಅಭಿಯಾನವನ್ನು ಹಮ್ಮಿಕೊಂಡಿದ್ದರು.
ಶಿರಸಿ ನಗರದ ಹೊಸ ಬಸ್ ನಿಲ್ದಾಣ,ಬಿಡ್ಕಿ ಬೈಲ್, ಹೊಸ ಬಸ್ ನಿಲ್ದಾಣ,ಐದು ರಸ್ತೆ,ಹಳೆ ಬಸ್ ನಿಲ್ದಾಣಗಳಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಪೊಸ್ಟರ್‌ಗಳನ್ನು ಬಸ್,ಆಟೋ,ಮತ್ತು ಗೋಡೆಗಳಿಗೆ ಅಂಟಿಸುವ ಮೂಲಕ ಸಾರ್ವಜನಿಕರಿಗೆ ವಿನೂತನವಾಗಿ ಅರಿವು ಮೂಡಿಸಿದರು.
ಶಿರಸಿ ಉಪ ವಿಭಾಗದ ಡಿಎಸ್ಪಿ ಗಣೇಶ ಕೆಎಲ್,ಶಿರಸಿ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ. ನೇತೃತ್ವದಲ್ಲಿ ಎಎಸ್ಐಗಳಾದ ಹೊನ್ನಪ್ಪ ಅಗೇರ,ರೋಷನ್ ನೇತ್ರೆಕರ್ ಸಿಬ್ಬಂದಿಗಳಾದ ಹನುಮಂತ ಕಬಾಡಿ,ನಾಗಪ್ಪ ಲಮಾಣಿ,ಅರುಣ ಲಮಾಣಿರವರು ಅಭಿಯಾನದಲ್ಲಿ ಭಾಗವಹಿಸಿದ್ದರು.