ಯಲ್ಲಾಪುರ: ಮಕ್ಕಳನ್ನು ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಅಪರಾಧ. ಈ ಕುರಿತು ಜಾಗೃತಿ ಮೂಡಿಸಲು ಬಾಲಕಾರ್ಮಿಕ ವಿರೋಧಿ ದಿನ ಆಚರಿಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಬಿ.ಹಳ್ಳಕಾಯಿ ಹೇಳಿದರು.
ಅವರು ಪಟ್ಟಣದ ನ್ಯಾಯಾಲಯದ ಆವಾರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ ಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ್, ಪ್ರಭಾರಿ ಸಿಡಿಪಿಒ ಫಾತಿಮಾ ಚುಳಕಿ, ಅರೆಕಾಲಿಕ ನ್ಯಾಯಿಕ ಸ್ವಯಂಸೇವಕರಾದ ಸುಧಾಕರ ನಾಯಕ, ಗಣಪತಿ ನಾಯ್ಕ ಇತರರಿದ್ದರು.ವೈಟಿಎಸ್ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನೊಳಗೊಂಡ ಜಾಥಾ ಪಟ್ಟಣದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿತು.