ಶಿರಸಿ: ನಗರದ ರಾಮನಬೈಲ್‌ನ ಕುಳವೆ ಕ್ರಾಸ್ ಹತ್ತಿರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.
ಆರೋಪಿತನಾದ ನಿಹಾಲ್ ಡಿಯಾಗೋ ಫರ್ನಾಂಡಿಸ್ ಗಣೇಶನಗರ ಈತನು ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿಕೊಂಡು ಬಂದು ರಾಮನಬೈಲ್ ನ ಕುಳವೆ ಕ್ರಾಸ್ ಬಳಿ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿತನಿಂದ ಅಂದಾಜು 80,000ರೂ ಮೌಲ್ಯದ 804 ಗ್ರಾಂ ಗಾಂಜಾ, 2100/- ರೂ ನಗದು ಹಣ,ಹಾಗೂ ಸಾಗಾಟ ಮಾಡಲು ಬಳಸಿದ 20,000/- ರೂ ಮೌಲ್ಯದ KA 31 U5393 ಹೀರೊ ಸ್ಲೆಂಡರ್ ಮೊಟಾರ್ ಸೈಕಲ್ ಜಪ್ತಿ ಪಡಿಸಿಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎನ್.ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸಿ.ಟಿ ಜಯಕುಮಾರ್
ಶಿರಸಿ ಉಪ ವಿಭಾಗದ ಡಿಎಸ್ಪಿ ಗಣೇಶ ಕೆಎಲ್,ಶಿರಸಿ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಹನುಮಂತ ಕಬಾಡಿ,ಪ್ರಶಾಂತ ಪಾವಸ್ಕರ್,ನಾಗಪ್ಪ ಲಮಾಣಿ, ಸದ್ದಾಂ ಹುಸೇನ್,ಪ್ರವೀಣ್ ಎನ್. ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಪಿಎಸ್ಐ ಮಹಾಂತಪ್ಪ ಕುಂಬಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,