ಯಲ್ಲಾಪುರ: ಪಟ್ಟಣದ ತಹಶಿಲ್ದಾರ ಕಚೇರಿಯ ಆವರಣದಲ್ಲಿ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ಡೆಂಗ್ಯೂ ನಿಯಂತ್ರಣ ಸಂಬಂಧ ಜಾಗೃತಿ ಜಾಥಾಕ್ಕೆ ತಹಶೀಲ್ದಾರ ಅಶೋಕ ಭಟ್ಟ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು,ಡೆಂಗ್ಯೂ ಜ್ವರ ಎಲ್ಲೆಡೆ ಹಬ್ಬುತ್ತಿದ್ದು,ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಲಾರ್ವಾ ಸೊಳ್ಳೆ ಉತ್ಪತ್ತಿ ತಾಣವನ್ನು ನಾಶ ಮಾಡಬೇಕು. ಈಕುರಿತು ಮನೆಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ. ಭಟ್ಟ ಮಾತನಾಡಿ,ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು,ಮನೆ ಮನೆಗೆ ತೆರಳಿ ಡೆಂಗ್ಯೂ ಕುರಿತು ಅರಿವು ಮೂಡಿಸಲಾಗುತ್ತದೆ ಎಂದರು. ಆರೋಗ್ಯ ಸಹಾಯಕ ಮಹೇಶ ತಾಳಿಕೋಟೆ, ಆಶಾ ಕಾರ್ಯಕರ್ತರು,ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದರು.