ಶಿರಸಿ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ ಕೊಡಮಾಡುವ ದತ್ತಿನಿಧಿ ಪ್ರಶಸ್ತಿಗೆ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ, ಸಾಹಿತಿ, ಗಝಲ್ ಕವಿ ಜಿ.ಸುಬ್ರಾಯ ಭಟ್ ಬಕ್ಕಳ ಆಯ್ಕೆಯಾಗಿದ್ದಾರೆ.
ಎರಡು ದಶಕಗಳಿಗೂ ಅಧಿಕ ಕಾಲದಿಂದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ ಕಲೆಗಳ ಉಳಿವಿಗಾಗಿ ಇತರ ಕನ್ನಡ ಪರ ಸಂಘಟನೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ಇಂಥ ಕ್ರಿಯಾಶೀಲ ಸಂಘ ಉದ್ಯಮಿ ದುಬೈ ಉದ್ಯಮಿ ಜೊಸೆಫ್ ಮಾಥಿಯಾಸ್ ನೀಡುವ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು , ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ , ಅರಣ್ಯ ಸಚಿವ ಈಶ್ವರ ಖಂಡ್ರೆ,ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಸರಗೋಡು ಸಂಸದ ರಾಜ ಮೋಹನ್ ಉಣ್ಣಿತ್ತಾನ್ ,ಕೇರಳ ಶಾಸಕ ಎನ್.ಎ.ನೆಲ್ಲಿಕುನ್ನು, ನ್ಯಾಯವಾದಿ ಕುಂಞಂಬು , ಎಕೆಎಂ ಅಶ್ರಫ್ ಸೇರಿ ಹಲವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ತಿಳಿಸಿದ್ದಾರೆ. ಜಿ. ಸುಬ್ರಾಯ ಭಟ್ ಬಕ್ಕಳ ಅವರು ಪತ್ರಿಕೋದ್ಯಮ ಸೇವೆಗಾಗಿ ಕೆ. ಶಾಮರಾವ್ ಪ್ರಶಸ್ತಿ , ಡಿವಿಜಿ ಪುರಸ್ಕಾರ, ಗಜಲ್ ಸಾಹಿತ್ಯಕ್ಕೆ ಕುವೆಂಪು ಸಾಹಿತ್ಯ ಪುರಸ್ಕಾರ, ಕೌಸ್ತುಭ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂಬುದೂ ಉಲ್ಲೇಖನೀಯ.