Slide
Slide
Slide
previous arrow
next arrow

ಕೋಗಿಲಬನದಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆ

300x250 AD

ದಾಂಡೇಲಿ: ನಗರದ ಸಮೀಪದಲ್ಲಿರುವ ಬಡಕಾನಶಿರಡಾ – ಕೋಗಿಲಬನ ಗ್ರಾ.ಪಂ ವ್ಯಾಪ್ತಿಯಲ್ಲಿ‌ ಬರುವ ಕೋಗಿಲಬನದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್ಆರ್ ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡದ ಉದ್ಘಾಟನೆಯು ಮಂಗಳವಾರ ಜರುಗಿತು.

ಶಾಸಕರಾದ ಆರ್.ವಿ.ದೇಶಪಾಂಡೆ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಾ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಸಿಎಸ್ಆರ್ ಯೋಜನೆಯಡಿ ಅತ್ಯುತ್ತಮವಾಗಿ ಅಂಗನವಾಡಿ ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ. ಕಾಗದ ಕಾರ್ಖಾನೆಯವರು ಸಿಎಸ್ಆರ್ ಯೋಜನೆಯ ಮೂಲಕ ದಾಂಡೇಲಿ ನಗರ ಪ್ರದೇಶದಲ್ಲಿಯೂ ಹಲವಾರು ಅಂಗನವಾಡಿ ಕೇಂದ್ರಗಳಿಗೆ ಕಟ್ಟಡವನ್ನು ನಿರ್ಮಿಸಿ ಕೊಟ್ಟಿದ್ದಾರೆ. ಈ ಅಂಗನವಾಡಿ ಕೇಂದ್ರ ಸ್ಥಳೀಯ ಮಕ್ಕಳ ಶಿಕ್ಷಣಕ್ಕೆ ಭದ್ರ ಅಡಿಪಾಯವನ್ನು ಹಾಕುವಂತಾಗಲಿ ಎಂದು ಶುಭವನ್ನು ಹಾರೈಸಿದರು.

300x250 AD

ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ ಹಲವಾಯಿ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಾಘವೇಂದ್ರ ಎಚ್.ಆರ್ ಮತ್ತು ರಾಜೇಶ ತಿವಾರಿ, ದಾಂಡೇಲಿ ನಗರಸಭೆಯ ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಗರಸಭೆಯ ಸದಸ್ಯರಾದ ಅನಿಲ್ ನಾಯ್ಕರ್, ತಹಶೀಲ್ದಾರ್ ಶೈಲೇಶ್ ಪರಮಾನಂದ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್, ಪಿಡಿಓ ಸುರೇಶ್ ಮಡಿವಾಳ, ಗ್ರಾ.ಪಂ ಕಾರ್ಯದರ್ಶಿ ಬಸವರಾಜ ಸೊಲ್ಲಾಪುರಿ ಹಾಗೂ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು, ಸಹಾಯಕರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top