ಜಿಲ್ಲೆಯ ಕೆಲವೆಡೆ ಅವಘಡ | ಸುರಕ್ಷಿತ ಸ್ಥಳಕ್ಕೆ ರವಾನೆ
ಕುಮಟಾ: ಜಿಲ್ಲೆಯಲ್ಲಿ ಮಳೆ ಕಳೆದೊಂದು ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದು, ಬಹುತೇಕ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ನಂದಿಯಂಚಿನ ಪ್ರದೇಶಗಳಲ್ಲಿ ಪ್ರವಾಹದ ಮುನ್ಸೂಚನೆ ನೀಡಲಾಗಿದ್ದು, ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೆಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಶಿರಸಿ ತಾಲೂಕು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿದ್ದು, ಕೆಲವೆಡೆ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ರಸ್ತೆ ಮೇಲೆ ಮರ ಬಿದ್ದು ರಸ್ತೆ ಸಂಚಾರದಲ್ಲಿ ವ್ಯತ್ಯಯ, ಮನೆ ಮೇಲೆ ಮರ ಬಿದ್ದಿರುವುದು, ಧರೆ ಕುಸಿಯುವುದು, ನೀರು ಮನೆಗೆ ನುಗ್ಗಿರುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಮಳೆ ಸೃಷ್ಟಿಸಿದೆ. ಜಿಲ್ಲಾಡಳಿತ, ತಾಲೂಕಾಡಳಿತದ ಜೊತೆಗೆ ಜನತೆಯೂ ಸಹ ಈ ನಿಟ್ಟಿನಲ್ಲಿ ಜಾಗೃತರಾಗಿರುವುದು ಅವಶ್ಯಕವಾಗಿದೆ.