ಶಿರಸಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ, ಉತ್ತರ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿರಸಿಯ ಕಸ್ತೂರಬಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡದ ಉದ್ಘಾಟನಾ ಸಮಾರಂಭವು ಜು.8, ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಸ.ಹಿ.ಪ್ರಾ. ಶಾಲೆ, ನಂ. 2 ಆವರಣದಲ್ಲಿ ಆಯೋಜನೆಗೊಂಡಿದೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತಿ ನೀಡಲಿದ್ದು, ಶಾಸಕ ಭೀಮಣ್ಣ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಆರ್.ವಿ. ದೇಶಪಾಂಡೆ, ಶಾಸಕ ಸತೀಶ್ ಸೈಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸದಸ್ಯ ಎಸ್.ವಿ.ಸಂಕನೂರು, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ್, ನಗರ ಸಭೆಯ ಕುಮಾರ್ ಬೋರ್ಕರ್, ಮಧುಕರ್ ಬಿಲ್ಲವ, ಅಬ್ದುಲ್ ಖಾದರ್ ಹಸನಸಾಬ್ ಆನವಟ್ಟಿ, ಶೀಲು ವಾಜ್ ಉಪಸ್ಥಿತರಿರಲಿದ್ದಾರೆ.