Slide
Slide
Slide
previous arrow
next arrow

ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿ

300x250 AD

ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್ 1 ರಿಂದ ಆರಂಭವಾಗಲಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: Tel:+919380162042,Tel:+919740982585 ಅನ್ನು ಸಂಪರ್ಕಿಸಿ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top