Slide
Slide
Slide
previous arrow
next arrow

ಜೋಸೆಫ್ ಎಸ್. ಫರ್ನಾಂಡೀಸ್ ನಿಧನ

300x250 AD

ದಾಂಡೇಲಿ : ನಗರದ ನಿರ್ಮಲ ನಗರದ ನಿವಾಸಿ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ನಿವೃತ್ತ ಅಧಿಕಾರಿ ಜೋಸೆಫ್ ಎಸ್. ಪೆರ್ನಾಂಡೀಸ್ ಮಂಗಳವಾರ ವಿಧಿವಶರಾದರು. ಮೃತರಿಗೆ 89 ವರ್ಷ ವಯಸ್ಸಾಗಿತ್ತು.

ಇವರು ತಮ್ಮ ವೃತ್ತಿ ಬದುಕಿನ ಜೊತೆ ಜೊತೆಗೆ ಟ್ಯೂಷನ್ ಕೇಂದ್ರವನ್ನು ನಡೆಸುತ್ತಿದ್ದರು. ಇದರ ಹೊರತಾಗಿಯೂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ, ಉರ್ದು ಆಂಗ್ಲೋ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.

300x250 AD

ಸರಳ, ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಜೋಸೆಫ್ ಫೆರ್ನಾಂಡಿಸ್ ಅವರು ಪತ್ನಿ, ಓರ್ವ ಪುತ್ರ, ಮೂವರು ಸುಪುತ್ರಿಯರನ್ನು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.

Share This
300x250 AD
300x250 AD
300x250 AD
Back to top