Slide
Slide
Slide
previous arrow
next arrow

ಜಿಲ್ಲೆಯಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಡಿಸಿ ಲಕ್ಷ್ಮೀಪ್ರಿಯಾ

300x250 AD

ಕಾರವಾರ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ, ಅದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಸಭೆಯಲ್ಲಿ ಮತನಾಡಿದರು. ಪ್ರತೀ ಶುಕ್ರವಾರ ಡೆಂಗ್ಯೂ ನಿಯಂತ್ರಣಕ್ಕೆ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಯನ್ನು ನಡೆಸಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕನಿಷ್ಠ 5 ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಮತ್ತು ಕಡ್ಡಾಯವಾಗಿ ಈ ಚಟುವಟಿಕೆಯನ್ನು ಕೈಗೊಂಡು ಸಂಜೆಯ ವೇಳೆಗೆ ಪ್ರಗತಿಯ ವರದಿಯನ್ನು ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಈ ಕಾರ್ಯದಲ್ಲಿ ನಿರ್ಲಕ್ಷö್ಯ ತೋರುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯತ್‌ಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು, ಎಲ್ಲಡೆ ಸ್ವಚ್ಚತೆ ಕಾಪಾಡಬೇಕು. ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು, ಗೂಡಂಗಡಿಗಳಲ್ಲಿ ಬಳಸಿ ಬಿಸಾಡುವ ಎಳನೀರಿನ ಚಿಪ್ಪುಗಳಲ್ಲಿ ಮಳೆ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಲಿದ್ದು, ಈ ಬಗ್ಗೆ ಗಮನ ಹರಿಸುವುದರ ಜೊತೆಗೆ, ಆರೋಗ್ಯ ಇಲಾಖೆಯಿಂದ ಸೂಚಿಸುವ ಡೆಂಗ್ಯೂ ನಿಯಂತ್ರಣ ಕುರಿತ ಎಲ್ಲಾ ಕ್ರಮಗಳನ್ನು ಅನುಷ್ಠಾನಗೊಳಿಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ತಿಳಿಸಿದರು.

300x250 AD

ಆರೋಗ್ಯ ಇಲಾಖೆಯ ಮೂಲಕ ಈಗಾಗಲೇ ಶಾಲಾ ಶಿಕ್ಷಕರಿಗೆ ಡೆಂಗ್ಯೂ ನಿಯಂತ್ರಣ ಕ್ರಮಗಳ ಕುರಿತಂತೆ ತರಬೇತಿಯನ್ನು ನೀಡಲಾಗಿದ್ದು, ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಮತ್ತು ಇತರೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ತಿಳಿಸಿ ಅವರ ಮೂಲಕ ಮನೆ ಮನೆಗಳಿಗೆ ಜಾಗೃತಿ ಮೂಡುವಂತೆ ಮಾಡುವುದರ ಜೊತೆಗೆ ಶಾಲಾ ಆವರಣದಲ್ಲಿ ಸ್ವಚ್ಚತೆಯನ್ನು ಕಾಪಾಡುವ ಮೂಲಕ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಜಿಲ್ಲೆಗೆ ಉದ್ಯೋಗ ಅರಸಿ ಬರುವ ಕಾರ್ಮಿಕರ ಮೂಲಕ ಡೆಂಗ್ಯೂ ಹರಡುವ ಸಂಭವವಿದ್ದು, ವಲಸೆ ಕಾರ್ಮಿಕರು ಆಗಮಿಸಿದಾಗ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಅವರ ಆರೋಗ್ಯ ತಪಾಸಣೆ ಮಾಡಿಸಲು ಹಾಗೂ ಎಲ್ಲಾ ಕಟ್ಟಡ ಮಾಲೀಕರಿಗೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಸೂಚನೆ ನೀಡುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಡೆಂಗ್ಯೂ ಪ್ರಕರಣಗಳ ಕುರಿತಂತೆ ಸಾರ್ವಜನಿಕ ತಪ್ಪು ಸಂದೇಶ ರವಾನೆಯಾಗಬಾರದು. ಪ್ರಕರಣಗಳ ಖಚಿತತೆಯ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಪ್ರಕರಣಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮುಂದಾಗುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ರೋಗ ಬಂದ ನಂತರ ಚಿಕಿತ್ಸೆ ನೀಡುವ ಬದಲು, ರೋಗ ಬಾರದಂತೆ ಎಚ್ಚರಿಕೆ ವಹಿಸುವುದು ಉತ್ತವi, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ ಹರಡದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರ) ಡಾ. ನಟರಾಜ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ ರಾವ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top