ಕಾರವಾರ: ದೇಶದಲ್ಲಿ ಪ್ರತಿದಿನ ಜನಸಂಖ್ಯೆ ಏರಿಕೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿದಾಗ ಜನಸಂಖ್ಯಾ ನಿಯಂತ್ರಿಸಲು ಇರುವ ಕ್ರಮಗಳ ಬಗ್ಗೆ ತಿಳಿಸಿ, ಈ ಕ್ರಮಗಳನ್ನು ಅನುಸರಿಸುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮಹಿಳೆಯರಿಗೆ ಅರಿವು ಮೂಡಿಸುವ ಮೂಲಕ ಜನಸಂಖ್ಯಾ ನಿಯಂತ್ರಿಸುವ ಕಾರ್ಯವನ್ನು ಮಾಡಬೇಕು ಎಂದು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು/ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವನಾಂದ ಕುಡ್ತಳಕರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ಆಯೋಜಿಸಲಾದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸುವವರು ಹಾಗೂ ಆಶಾ ಕಾರ್ಯಕರ್ತೆಯರು ಕೇವಲ ಹಣಕ್ಕಾಗಿ ತಮ್ಮ ಕರ್ತವ್ಯ ನಿರ್ವಹಿಸುವುದಿಲ್ಲ. ಜನರ ಸೇವೆಯನ್ನು ಮಾಡಲು ದೇವರು ನಮಗೆ ನೀಡಿರುವ ಅವಕಾಶ ಎಂದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣ ವಸ್ತçದ ಪ್ರಾಸ್ತವಿಕವಾಗಿ ಮಾತನಾಡಿ, ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ, ಕುಟುಂಬ ಯೋಜನೆ ಅಳವಡಿಕೆಯ ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ” ಎಂಬ ಘೋಷ ವಾಕ್ಯದೊಂದಿಗೆ ಸಮುದಾಯ ಜಾಗೃತೀಕರಣ ಪಾಕ್ಷಿಕ ಜೂನ್ 27 ರಿಂದ ಜುಲೈ 10ರ ರವರೆಗೆ ಹಾಗೂ ಸೇವಾ ಪಾಕ್ಷಿಕ ಜುಲೈ 1 ರಿಂದ ಜುಲೈ 24ರ ವರೆಗೆ ಆಚರಿಸುವ ಮೂಲಕ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಆಶಾ ಕಾರ್ಯಕರ್ತೆಯರು ಹೆಚ್ಚಾಗಿ ಜನಸಂಖ್ಯಾ ನಿಯಂತ್ರಣ ಕುರಿತು ಸಾರ್ವಜನಿಕ ಅರಿವು ಮೂಡಿಸಬೇಕು. ಕುಟುಂಬ ಯೋಜನೆಗೆ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳನ್ನು ಮಹಿಳೆಯರಿಗೆ ತಾತ್ಕಾಲಿಕ ಗರ್ಭ ನಿರೋಧಕ ಮಾತ್ರೆಗಳು, ಪಿ.ಪಿ.ಐ.ಯು.ಸಿ.ಡಿ, ಪಿ.ಎ.ಐ.ಯು.ಸಿಡಿ, ಛಾಯಾ ಹಾಗೂ ಅಂತರ ಚುಚ್ಚುಮದ್ದುಗಳಿವೆ. ಪುರುಷರಿಗಾಗಿ ನಿರೋಧಗಳಿವೆ. ಈ ವಿಧಾನಗಳನ್ನು ಅನುಸರಿಸುವುದರಿಂದ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಜನನದ 3 ವರ್ಷ ಅಂತರವನ್ನು ಕಾಪಾಡಿಕೊಳ್ಳಬಹುದು. ಶಾಶ್ವತ ವಿಧಾನದಲ್ಲಿ ಮಹಿಳೆಯರಿಗಾಗಿ ಲ್ಯಾಪ್ರೋಸ್ಕೋಫಿಕ್ ಮತ್ತು ಟ್ಯೂಬೆಕ್ಟೋಮಿ ಎಂಬ ಎರಡು ವಿಧಾನಗಳಿವೆ. ಪುರುಷರಿಗಾಗಿ ನೋಸ್ಮಾರೈಲ್ ವ್ಯಾಸೆಕ್ಟೋಮಿ ವಿಧಾನಗಳಿವೆ. ಎರಡು ಮಕ್ಕಳ ನಂತರ ಶಾಶ್ವತವಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ಜನಸಂಖ್ಯಾ ಸ್ಫೋಟದಿಂದ ಆಗುವ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.
ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆಯಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಚಿಕಿತ್ಸೆಯಲ್ಲಿ ಹೆಚ್ಚಿನ ಸಾಧನೆಗೈದ ಪ್ರಾಥಮಿಕ ಹಾಗೂ ಆಶಾ ಕಾರ್ಯಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ವಿಶ್ವ ಜನಸಂಖ್ಯೆ ನಿಯಂತ್ರಣ ದಿನಾಚರಣೆ ಪ್ರಯುಕ್ತ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್. ಕನ್ನಕ್ಕನವರು ನಿರೂಪಿಸಿದರು, ಡಿ.ಪಿ.ಸಿ ಬಸವರಾಜ ಸ್ವಾಗತಿಸಿದರು,
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಶಂಕರರಾವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯ್ಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರ್ಷ, ತಾಲೂಕಾ ಆರೋಗ್ಯಾಧಿಕಾರಿ ಡಾ. ಸುರಜ್ ನಾಯಕ, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.