Slide
Slide
Slide
previous arrow
next arrow

ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ

300x250 AD

ಯಲ್ಲಾಪುರ: ತಾಲೂಕಿನ ಕಂಪ್ಲಿ ಹಾಗೂ ಹಾಸಣಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಮಂಚಿಕೇರಿಯ ಹೆಸ್ಕಾಂ ಶಾಖಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಕಳೆದ ಒಂದು ತಿಂಗಳಿನಿಂದ ವಿದ್ಯುತ್ ವ್ಯತ್ಯಯ ಜೋರಾಗಿದೆ. ಇದನ್ನು ಸರಿಪಡಿಸಬೇಕು. ಒಂದು ವಾರದಲ್ಲಿ ಈ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
   ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಭಟ್ಟ, ಹಾಸಣಗಿ ಗ್ರಾ.ಪಂ ಅಧ್ಯಕ್ಷೆ ವಿನೋದಾ ಬಿಲ್ಲವ, ಉಪಾಧ್ಯಕ್ಷ ಪುರಂದರ ನಾಯ್ಕ, ಕಂಪ್ಲಿ ಗ್ರಾ.ಪಂ ಉಪಾಧ್ಯಕ್ಷ ಸದಾಶಿವ ಚಿಕ್ಕೊತ್ತಿ, ಪವನ ಕೇಸರಕರ್, ದಿವಾಕರ ಪೂಜಾರಿ, ಮುಸ್ತಾಕ ಶೇಖ್, ಬಾಲಚಂದ್ರ ಹೆಗಡೆ, ಹಿರಿಯಾ ಪೂಜಾರಿ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top