ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಮತದಾನದ ಹಕ್ಕನ್ನು ಪಡೆಯುವಂತಾಗಲು ವಿಶೇಷ ನೋಂದಣಿ ಅಭಿಯಾನ ಒಂದನ್ನು ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಆರಂಭಿಸಿದೆ.
ನವೆಂಬರ್ 2021 ರ 7, 14, 21 ಮತ್ತು 28 ನೇ ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಮತದಾರರ ಪಟ್ಟಿಯಲ್ಲಿ ಸೇರಲು ವಿಶೇಷ ನೋಂದಣಿ ಅಭಿಯಾನವನ್ನು ನಡೆಸಲು ಸಿದ್ಧತೆ ನಡೆಸಿದೆ.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2022 ರಡಿಯಲ್ಲಿ ಕರಡು ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟ ಅರ್ಹರನ್ನು ಸೇರ್ಪಡೆ ಮಾಡಲು ಈ ಅಭಿಯಾನ ನಡೆಯುತ್ತಿದೆ. ವಿಳಾಸದ ಪುರಾವೆಗಾಗಿ ಐಡಿ, ಎರಡು ಪಾಸ್ಪೋರ್ಟ್ ಅಳತೆ ಭಾವಚಿತ್ರಗಳ ಜೊತೆಗೆ ಹತ್ತಿರದ ಮತದಾನ ಕೇಂದ್ರಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಕೊಳ್ಳುವಂತೆ ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.
ಕರಡು ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟವರ ಸೇರ್ಪಡೆಗೆ ನೋಂದಣಿ ಅಭಿಯಾನ
