Slide
Slide
Slide
previous arrow
next arrow

ಸಾರ್ವಜನಿಕರ ನೆರವಿಗೆ ತುರ್ತು ಕಾರ್ಯಚರಣೆ ಕೇಂದ್ರ ಸ್ಥಾಪನೆ: ಡಿಸಿ ಮಾಹಿತಿ

300x250 AD

ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಅರಣ್ಯ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸಾರ್ವಜನಿಕರು ಮಳೆಯಿಂದಾಗಿ ಯಾವುದೇ ಅಪಾಯವಾದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1077 ಗೆ ಅಥವಾ ಮೊ.ಸಂ. ಸಂಖ್ಯೆ. 9483511015 ಕರೆ, ವಾಟ್ಸಾಪ್ ಮೂಲಕ ಮಾಹಿತಿ ನೀಡಿದಲ್ಲಿ ತಕ್ಷಣ ನೆರವಿಗೆ ಧಾವಿಸಲಾಗುವುದು ಎಂದರು.
ಕಾರವಾರದ ನೌಕಾ ನಲೆ ಮತ್ತು ರಾಷ್ಟಿçÃಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಸಂಭವಿಸಿಸುವ ಕೃತಕ ನೆರೆ ಸೇರಿದಂತೆ ಎಲ್ಲಾ ರೀತಿಯ ಅನಾಹುತಗಳಿಗೆ ಸೂಕ್ತ ಪರಿಹರ ಒದಗಿಸುವ ಉದ್ದೇಶದಿಂದ ಕಾರವಾರ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಮನ್ವಯ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ತಿಂಗಳಲ್ಲಿ ಕಡ್ಡಾಯವಾಗಿ ಕನಿಷ್ಠ ಒಮ್ಮೆ ಸಭೆ ಸೇರಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಮಾರ್ಗೊಪಾಯಗಳನ್ನು ಕಂಡುಕೊಳ್ಳುವAತೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ, 2 ಮನೆಗಳು ಸಂಪೂರ್ಣ ನಾಶ, 2 ಮನೆಗಳಿಗೆ ತೀವ್ರ ಹಾನಿ ಮತ್ತು 18 ಮನೆಗಳಿಗೆ ಭಾಗಶ: ಹಾನಿಯಾಗಿದ್ದು, ಕಾರವಾರದಲ್ಲಿ 2, ಕುಮಟಾ ದಲ್ಲಿ 1 ಹಾಗೂ ಹೊನ್ನಾವರದಲ್ಲಿ 2 ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಒಟ್ಟು 93 ಜನರಿಗೆ ಆಶ್ರಯ ಒದಗಿಸಿ ಅಗತ್ಯ ಉಟೋಪಚಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.
ತಗ್ಗು ಪ್ರದೇಶಗಳಲ್ಲಿ ಮತ್ತು ಗುಡ್ಡ ಕುಸಿಯಬಹುದಾದ ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು , ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕಾಳಜಿ ಕೇಂದ್ರಗಳಿಗೆ ಬಂದು ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನೌಕಾ ನಲೆ ಬಳಿ ಸಂಭವಿಸಿರುವ ನರೆ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿದ್ದು, ಈ ಪ್ರದೇಶದಲ್ಲಿ ನೀರು ಹರಿಯಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಮತ್ತು ನಿಂತಿರುವ ನೀರನ್ನು ಪಂಪ್ ಮಾಡುವ ಮೂಲಕ ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದರು.
ಉಪ ವಿಭಾಗಾಧಿಕಾರಿ ಕನಿಷ್ಕ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top