ಶಿರಸಿ: ನಿರಂತರ ವರುಣಾರ್ಭಟಕ್ಕೆ ಹಲವೆಡೆ ಗುಡ್ಡ ಕುಸಿತಗೊಂಡಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಅದ ಕಾರಣ ಮುನ್ನೆಚ್ಚರಿಕೆಯಾಗಿ ಪದವಿ ಕಾಲೇಜುಗಳಿಗೂ ಜಿಲ್ಲಾಡಳಿತ ರಜೆಯನ್ನು ಘೋಷಿಸಲಿ ಎಂದು ಯುವ ಮುಖಂಡ ಪ್ರಜ್ವಲ್ ಶೇಟ್ ಆಗ್ರಹಿಸಿದ್ದಾರೆ.
ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದೆ ಅದೇ ರೀತಿ ಜಿಲ್ಲೆಯ ಕೆಲವು ತಾಲೂಕಿನಲ್ಲಿ ಗುಡ್ಡ ಕುಸಿತಗೊಂಡು ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿ ರಸ್ತೆ ಸಂಪರ್ಕ ಸ್ಥಗಿತಗೊಂಡಿತ್ತು. ಭಾರಿ ಮಳೆಯ ಪರಿಣಾಮ ಉತ್ತರ ಕನ್ನಡ ಜಿಲ್ಲಾಡಳಿತ ಹಳಿಯಾಳ ಮುಂಡಗೋಡ ತಾಲೂಕುಗಳು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕಿನ ಶಾಲಾ, ಪ್ರೌಢಶಾಲೆ, ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳು ಎರಡು ದಿನ ರಜೆ ಘೋಷಿಸಿದ್ದರು.
ಜಿಲ್ಲೆಯ ಕೆಲವು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಕಳೆದ ಮೂರು ದಿನಗಳಿಂದ ಗುಡ್ಡ ಕುಸಿತಗೊಂಡು ರಸ್ತೆ ಸಂಪರ್ಕ ಸ್ಥಗಿತಗೊಂಡು ಬಸ್ ಸಂಚಾರ ವ್ಯವಸ್ಥೆ ಸಹ ಕೂಡ ಬಂದ್ ಆಗಿ ಅಲ್ಲಿನ ಸುತ್ತಮುತ್ತಲಿನ ಗ್ರಾಮದ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ, ಐಟಿಐ , ನರ್ಸಿಂಗ್ ಹೀಗೆ ಇನ್ನಿತರ ಪದವಿ ಹಂತದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಹೋಗಲು ಸಾಧ್ಯವಿಲ್ಲದಂತಾಗುತ್ತದೆ. ಇದರಿಂದ ಅವರ ಹಾಜರಾತಿಗೆ, ಜೊತೆಗೆ ಒಂದೊಮ್ಮೆ ಪರೀಕ್ಷೆಗಳಿದ್ದರೆ ವಿದ್ಯಾರ್ಥಿಗಳಿಗೆ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದವಜಿಲ್ಲೆಯ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ಹೋಗುವ ಸಮಯದಲ್ಲಿ ಯಾವುದೇ ರೀತಿಯ ಅನಾಹುತಗಳು ಆಗದೇ ರೀತಿಯಲ್ಲಿ ಹಾಗೂ ಪದವಿ ವಿದ್ಯಾರ್ಥಿಗಳ ಜೀವದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆ ಗುಡ್ಡ ಕುಸಿತಗೊಂಡ ರಸ್ತೆ ಸಂಪರ್ಕ ಸಂಪೂರ್ಣ ಸರಿಯಾಗುವ ತನಕ ಜಿಲ್ಲೆಯಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳಲ್ಲಿ ಪದವಿ ವಿದ್ಯಾರ್ಥಿಗಳಿಗೆ ಉತ್ತರ ಕನ್ನಡ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಿ ಎಂದು ಪ್ರಜ್ವಲ್ ಶೇಟ್ ಹೇಳಿದ್ದಾರೆ.