Slide
Slide
Slide
previous arrow
next arrow

ಜು.18ಕ್ಕೆ ಪತ್ರಿಕಾ ದಿನಾಚರಣೆ: ಸನ್ಮಾನ, ಪ್ರಶಸ್ತಿ ಪ್ರದಾನ

300x250 AD

ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಜು.18ರಂದು ಬೆಳಗ್ಗೆ 10ಕ್ಕೆ ಜರುಗಲಿದೆ.

ಪರಿಸರ ಬರಹಗಾರ ಶಿವಾನಂದ ಕಳವೆ ಪತ್ರಿಕಾ ದಿನಾಚರಣೆ ಉದ್ಘಾಟಿಸಲಿದ್ದು, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಅಧ್ಯಕ್ಷತೆ ವಹಿಸುವರು. ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಭಕ್ಕಳ ಪತ್ರಕರ್ತರ ಮಾಹಿತಿ ಬಿಡುಗಡೆ ಮಾಡುವರು.

300x250 AD

ಗುರುಮನೆ ದತ್ತಿನಿಧಿ ಪ್ರಶಸ್ತಿ ಪ್ರದಾನ:
ವಾಜಗದ್ದೆಯ ಶ್ರೀ ದುರ್ಗಾವಿನಾಯಕ ಕೃಷಿಕ ಯುವಕ ಸಂಘಕ್ಕೆ ಗುರುಮನೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಿದ್ದಾಪುರದ ಪತ್ರಿಕಾ ವಿತರಕ ಪ್ರಶಾಂತ ಶೇಟ್ ಅವರನ್ನು ಸನ್ಮಾನಿಸಲಾಗುತ್ತದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ  ಬಸವರಾಜ ಪಾಟೀಲ್ ಮುಂಡಗೋಡ ಉಪಸ್ಥಿತರಿರುತ್ತಾರೆ ಎಂದು ತಾಲೂಕು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.

Share This
300x250 AD
300x250 AD
300x250 AD
Back to top