Slide
Slide
Slide
previous arrow
next arrow

ಸಡಗೇರಿ ಗ್ರಾಮ ಗ್ಯಾಸ್ ಸೋರಿಕೆ ಅಪಾಯದಿಂದ ಮುಕ್ತ : ಡಿಸಿ ಲಕ್ಷ್ಮಿಪ್ರಿಯ

300x250 AD

ಕಾರವಾರ: ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್‌ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್‌ನ್ನು ಹೆಚ್,ಪಿ.ಸಿ.ಎಲ್, ಬಿ.ಪಿ.ಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಮುಕ್ತಗೊಳಿಸಲಾಗಿದ್ದು, ಗ್ರಾಮಸ್ಥರು ತಮ್ಮ ಮನೆಗಳಿಗೆ ವಾಪಸ್ ಬರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ತಿಳಿಸಿದ್ದಾರೆ.

ಅವರು ಶುಕ್ರವಾರ ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು.

ಅಂಕೋಲ ಶಿರೂರು ಸಮೀಪ ಸಂಭವಿಸಿದ್ದ ಗುಡ್ಡ ಕುಸಿತ ಪ್ರದೇಶದಲ್ಲಿ ರಸ್ತೆಯ ಮೇಲಿದ್ದ ಮಣ್ಣು ತೆರವು ಕಾರ್ಯಾಚರಣೆ ಮುಗಿದಿದ್ದು, ಹೆದ್ದಾರಿಯ ಒಂದು ಬದಿಯನ್ನು ಮುಕ್ತಗೊಳಿಸಲಾಗಿದ್ದು, ಆದರೆ ಯಾವುದೇ ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಿಲ್ಲ ಎಂದರು.

ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಬಿದ್ದಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ,ಕಾರವಾರ ತಾಲೂಕಿನ 6 , ಅಂಕೋಲದ 6, ಕುಮಟಾದ 5, ಹೊನ್ನಾವರದ 13 ಸೇರಿದಂತೆ ಒಟ್ಟು 30 ಕಾಳಜಿ ಕೇಂದ್ರಗಳಲ್ಲಿ 2373 ಮಂದಿ ಆಶ್ರಯ ಒದಗಿಸಲಾಗಿದ್ದು, ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದರು.

300x250 AD

ಗುಡ್ಡ ಕುಸಿತ ಪ್ರದೇಶದಲ್ಲಿ ಇದುವರೆಗೆ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಜ್ ಲಾರಿ ಮತ್ತು ಚಾಲಕ ಸಿಲುಕಿರುವ ಸಾದ್ಯತೆಯಿದ್ದು ಈ ಬಗ್ಗೆ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದ ಮೂಲಕ ಮೆಟಲ್ ಡಿಕ್ಟೇಟರ್ ಮೂಲಕ ವಾಹನದ ತಪಾಸಣೆ ಕೈಗೊಳ್ಳಲಾಗಿದೆ, ನೇವಿ ಅಧಿಕಾರಿಗಳು , ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ , ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಮೀಪದ ನದಿಯಲ್ಲಿ ಕೂಡಾ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ತಿಳಿಸಿದರು.

ಇನ್ಸ್ಪೆಕ್ಟರ್ ಜನರಲ್ ಅಫ್ ಪೊಲೀಸ್ ಅಮಿತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸುರಕ್ಷಿತ ಕಾರ್ಯಚರಣೆಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ,ಭಟ್ಕಳ ಉಪ ವಿಭಾಗಾಧಿಕಾರಿ ಡಾ. ನಯನ ಮತ್ತು ವಿವಿಧ ಅಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top