ಶಿರಸಿ: ಅಕ್ಟೋಬರ್ ಮತ್ತು ನವೆಂಬರ್-2023 ನೇ ಮಾಹೆಗಳ ರೂ.5 ಪ್ರೋತ್ಸಾಹಧನವು ಜು.20 ಶನಿವಾರದಂದು ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉಪಾಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು.
ಈ ಸಂದರ್ಭದಲ್ಲಿ ಹೇಳಿಕೆ ನೀಡಿದ ಅವರು 2023-2024 ನೇ ಸಾಲಿನಲ್ಲಿ ಅಕ್ಟೋಬರ್, ನವೆಂಬರ್, ಡಿಸೆಂಬರ್, ಜನವರಿ, ಫೆಬ್ರವರಿ ಹಾಗೂ ಮಾಹೆಗಳ ರೂ. 5 ಪ್ರೋತ್ಸಾಹಧನ ಸರ್ಕಾರದಿಂದ ಹಾಲು ಉತ್ಪಾದಕ ರೈತರ ಖಾತೆಗೆ ಸರ್ಕಾರದಿಂದ ಜಮಾ ಆಗಬೇಕಾಗಿದ್ದು, ಅವುಗಳಲ್ಲಿ ಡಿಸೆಂಬರ್, ಜನವರಿ, ಫೆಬ್ರವರಿ ಮಾಹೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಮಾಹೆಗಳ ರೂ.5 ಪ್ರೋತ್ಸಾಹಧನ ಹಾಲು ಉತ್ಪಾದಕರ ಖಾತೆಗೆ ಜಮಾ ಆದಂತಾಗಿದೆ. ಡಿಸೆಂಬರ್-2023 ನೇ ಮಾಹೆಯ ಹಾಲಿನ ಪ್ರೋತ್ಸಾಹಧನವನ್ನು ಕೂಡ ಅಕ್ಟೋಬರ್ ಮತ್ತು ನವೆಂಬರ್-2023 ನೇ ಮಾಹೆಗಳ ಜೊತೆಗೆ ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ಕ್ಷೀರಿ ತಂತ್ರಾಂಶದ ಅಧಿಕಾರಿಗಳು ನಮಗೆ ತಿಳಿಸಿದ್ದು, ಡಿಸೆಂಬರ್-2023 ನೇ ಮಾಹೆಯ ಹಾಲಿನ ಪ್ರೋತ್ಸಾಹಧನ ಕೂಡ ಶೀಘ್ರವೇ ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಆಗುವ ನೀರಿಕ್ಷೆಯಿದೆ ಎಂದು ಮಾಹಿತಿ ನೀಡಿದರು. ಅಕ್ಟೋಬರ್ ಮತ್ತು ನವೆಂಬರ್-2023 ನೇ ಮಾಹೆಗಳ ರೂ.5 ಪ್ರೋತ್ಸಾಹಧನ ಜಮಾ ಆಗದ ಹಾಲು ಉತ್ಪಾದಕ ರೈತರು ಕೂಡಲೇ ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.