Slide
Slide
Slide
previous arrow
next arrow

ವಿದೇಶಿ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ, ಜೈನ, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದಿರುವ ವಿದೇಶದ ವಿಶ್ವವಿದ್ಯಾಲಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ (OVERSEAS EDUCATION) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ http://kmdconline.karnataka.gov.in ಆನ್‌ಲೈನ್ ಮೂಲಕ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಾಸೀಂ ಮಂಜಿಲ್, 1ನೇ ಮಹಡಿ, ಹೈಚರ್ಚ ರಸ್ತೆ, ಕಾರವಾರ. ದೂರವಾಣಿ ಸಂಖ್ಯೆ: Tel:+9108382221180ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top