Slide
Slide
Slide
previous arrow
next arrow

ಭಟ್ಕಳ ಮಾರಿಜಾತ್ರೆಗೆ ವಿದ್ಯುಕ್ತ ಚಾಲನೆ:  ಹರಕೆ ಸಲ್ಲಿಸಿ ಕೃತಾರ್ಥರಾದ ಭಕ್ತರು

300x250 AD

ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿದೆ. ಬುಧವಾರದಂದು ಮುಂಜಾನೆ ಕರೆತರಲಾದ ಮಾರಿದೇವಿಯ ಮೂರ್ತಿಯನ್ನು ಮಾರಿಕಾಂಬಾ ದೇವಿಯ ಎದುರಿನ ಪ್ರಾಂಗಣದ ಗರ್ಭಗುಡಿಯ ಹೊರಗಡೆ ಮಾರಿದೇವಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.

ದೇವಿ ದರ್ಶನಕ್ಕೆ ಉದ್ದದ ಸಾಲು :

ಎರಡು ದಿವಸ ನಡೆಯುವ ಈ ಜಾತ್ರೆಯಲ್ಲಿ ಮೊದಲನೇ ದಿನವಾದ ಬುಧವಾರ ಪರ ಊರಿನವರು ತಮ್ಮ ಮನೆಯಲ್ಲಿ ಹಬ್ಬ ಆಚರಿಸುತ್ತಾರೆ. ಎರಡನೇ ದಿನವಾದ ಗುರುವಾರದಂದು ಸ್ಥಳೀಯರು ಹಬ್ಬ ಆಚರಿಸಲಿದ್ದಾರೆ. ಸಂಭ್ರಮದಿಂದ ಜರುಗುವ ಈ ಜಾತ್ರೆಯಲ್ಲಿ ಅಕ್ಕಪಕ್ಕದ ತಾಲೂಕಿನಿಂದಲೂ ಭಕ್ತರು ಬಂದು ದೇವಿಯ ಆಶೀರ್ವಾದ ಪಡೆಯುತ್ತಿದ್ದು, ಉದ್ದದ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ದರ್ಶನದ ಸರದಿ ಸಾಲು ದೇವಸ್ಥಾನ ದಿಂದ ಒಂದು ಕಿಲೋಮೀಟರ್ ದೂರದ ತನಕ ಇತ್ತು. ಮಳೆ  ಇಲ್ಲದ ಕಾರಣ ದರ್ಶನಕ್ಕೆ ಬಂದಂತ ಭಕ್ತರಿಗೆ ಅನುಕೂಲವಾಯಿತು. ಹಣ್ಣು ಕಾಯಿ ಜೊತೆಗೆ ಹರಕೆಯನ್ನು ತೀರಿಸಿ ಭಕ್ತರು ಕೃತಾರ್ಥರಾದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತರ ದರ್ಶಕ್ಕೆ ಉತ್ತಮ ವ್ಯವಸ್ಥೆ ಮಾಡಿಕೊಟ್ಟಿರುವುದರಿಂದ ಮಾರಿ ದೇವಿ ದರ್ಶನಕ್ಕೆ ಯಾವುದೇ ತೊಂದರೆಯಾಗಿಲ್ಲ.

ಬೆಳ್ಳಿ ಕಣ್ಣು, ಹೂವಿನ ಟೋಪಿ ಹರಕೆ: ಮಾರಿರೂಪದಲ್ಲಿ ಕುಳಿತಿರುವ ಈ ದೇವಿಗೆ ಭಕ್ತರು ಕಣ್ಣು ಬೇನೆ, ಸಿಡುಬು ಹಾಗು ಇನ್ನಿತರ ಸಾಂಕ್ರಾಮಿಕ ರೋಗಗಳು ಬಾರದೇ ತಡೆಗಟ್ಟುವಂತೆ ಭಕ್ತಿಯಿಂದ ಹೂವಿನ ಟೋಪಿ, ಎಲೆಯಿಂದ ಮಾಡಿದ ಹೂ ಕಟ್ಟು, ಬೆಳ್ಳಿಯ ಕಣ್ಣುಗಳನ್ನು ಅರ್ಪಿಸಿ ಕಾಪಾಡುವಂತೆ ಮೊರೆ ಇಡುವುದು ಈ ಜಾತ್ರೆಯ ವಿಶೇಷತೆಗಳಲ್ಲಿ ಒಂದಾಗಿದ್ದು, ಈ ಬಾರಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹರಕೆ ತೀರಿಸಿದ್ದಾರೆ. ತಮಗೆ ಬಂದ ಕಷ್ಟ ಕಾರ್ಪಣ್ಯಗಳು ದೂರಾಗಲಿ ಎಂದು ಹರಿಕೆ ಹೊತ್ತ ಭಕ್ತರು, ವಾರ್ಷಿಕ ಜಾತ್ರೆಯಲ್ಲಿ ಹರಿಕೆ ತೀರಿಸುವುದು ವಾಡಿಕೆಯಾಗಿದೆ.

300x250 AD

ಬಿಗಿ ಬಂದೋಬಸ್ತ್‌:
ಮಾರಿ ಜಾತ್ರೆ ಹಿನ್ನೆಲೆ ಪೊಲೀಸ್‌ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಾರಿ ಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೊದಲು ಬಾಂಬ್ ನಿಷ್ಕ್ರಿಯ ದಳದಿಂದ ದೇವಸ್ಥಾನವನ್ನು ತಪಾಸಣೆ ಮಾಡಲಾಯಿತು. ಬಳಿಕ ಮಾರಿ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ  ಮಾಡಲಾಯಿತು. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಟ್ಕಳದಲ್ಲಿ ಭೇಟಿ ನೀಡಿದ್ದಾರೆ.

ಜಿಲ್ಲೆಯಲ್ಲಿಯೇ ಅತ್ಯಂತ ವಿಜೃಂಭಣೆಯಿಂದ ಅದ್ದೂರಿಯಾಗಿ ನಡೆಯುವ ಮಾರಿ ಜಾತ್ರೆಗಳಲ್ಲಿ ಭಟ್ಕಳ ತಾಲೂಕಿನ ಮಾರಿ ಜಾತ್ರೆ ಸಹ ಒಂದು. ಸುಮಾರು ೨೫ ವರ್ಷಗಳ ಹಿಂದೆ ಮಾರಿಜಾತ್ರೆ ಸಂಪೂರ್ಣವಾಗಿ ಗ್ರಾಮದೇವತೆಯ ಉತ್ಸವವಾಗಿದ್ದು, ಹಿಂದುಳಿದವರ ಹಾಗೂ ಪರಿಶಿಷ್ಠ ಜಾತಿ ಪಂಗಡದವರ ಮುಂದಾಳತ್ವದಲ್ಲಿ ನಡೆಯುತಿದ್ದ ವಿಶಿಷ್ಟ ಜಾತ್ರೆಯಿದು.

Share This
300x250 AD
300x250 AD
300x250 AD
Back to top