Slide
Slide
Slide
previous arrow
next arrow

ಸೈನ್ಯ ಸೇರಲು ವಿಫುಲ ಅವಕಾಶವಿದ್ದು, ಯುವಕರು ಸದುಪಯೋಗಪಡಿಸಿಕೊಳ್ಳಿ: ಮಾಧವಚಂದ್ರ ಪಂಡರಾಪುರ

300x250 AD

ಯಲ್ಲಾಪುರ: ಸೇನೆಯಲ್ಲಿ ಸೇವೆ ಸಲ್ಲಿಸಲು ವಿಫುಲ ಅವಕಾಶವಿದ್ದು, ಯುವಕರು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ದೇಶಸೇವೆಯೊಂದಿಗೆ ದೇಶಭಕ್ತಿ, ಶಿಸ್ತು, ಆತ್ಮವಿಶ್ವಾಸವನ್ನೂ ಅದರಿಂದ ರೂಢಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ವಾಯುಸೇನೆಯ ನಿವೃತ್ತ ಜೂನಿಯರ್ ವಾರಂಟ್ ಆಫೀಸರ್ ಮಾಧವಚಂದ್ರ ಪಂಡರಾಪುರ ಹೇಳಿದರು.

ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ವತಿಯಿಂದ ಸಂಸ್ಥೆಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಕಾರ್ಗಿಲ್ ವಿಜಯ ದಿವಸದ 25ನೇ  ವರ್ಷಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ‘ಸೈನಿಕರಿಗೊಂದು ಸೆಲ್ಯೂಟ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಅಗ್ನಿವೀರ್ ಎಂಬ ಯೋಜನೆಯ ಮೂಲಕ ಸೈನ್ಯ ಸೇರುವ ಆಸಕ್ತರಿಗೆ ಉತ್ತಮ ಅವಕಾಶ ಮಾಡಿಕೊಡಲಾಗಿದೆ ಎಂದ ಅವರು ಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವಗಳನ್ನು ಹಂಚಿಕೊಂಡರು.
    ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುವುದಿಲ್ಲ. ನಾವು ಮಾಡುವ ಕಾರ್ಯವನ್ನೇ ದೇಶಕ್ಕೆ ಪೂರಕವಾಗಿ, ಯೋಧರಂತೆ  ಮಾಡಬೇಕು. ಈ ಸಂಕಲ್ಪ ಮಾಡಿದರೆ ಕಾರ್ಗಿಲ್ ವಿಜಯೋತ್ಸವದ ಆಚರಣೆ ಸಾರ್ಥಕವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮೀಡಿಯಾ ಸ್ಕೂಲ್ ವಿದ್ಯಾರ್ಥಿಗಳು ರೂಪಿಸಿದ ಕಾರ್ಗಿಲ್ ವಿಶೇಷ ಸಂಚಿಕೆ, ವಿಡಿಯೋ ಮತ್ತು ರೇಡಿಯೋ ಕಾರ್ಯಕ್ರಮಗಳ ಅನಾವರಣ ಮಾಡಲಾಯಿತು. ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ ಉಪಸ್ಥಿತರಿದ್ದರು. ಗುರು ಕಲ್ಮಠ ಸ್ವಾಗತಿಸಿದರು. ನಾಗರಾಜ ಪಟಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಲ್ಲವಿ ಮರಾಠಿ, ವಾಣಿ ಭಟ್ಟ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top