Slide
Slide
Slide
previous arrow
next arrow

‘ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ’

300x250 AD

ಸಿದ್ದಾಪುರ : ಡಾ.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮ ಜೋಳಿಗೆಯಲ್ಲಿ ದುಶ್ಚಟಗಳನ್ನೇ ಭಿಕ್ಷೆ ರೂಪದಲ್ಲಿ ಸಂಗ್ರಹಿಸಿ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಅರಿವು ಮೂಡಿಸಿದ್ದರು ದುರ್ವ್ಯಸನ ಹಾಗೂ ದುಶ್ಚಟಗಳಿಂದ ದೂರವಿದ್ದು ಮಕ್ಕಳು ವಿದ್ಯಾರ್ಥಿಗಳು ಯುವ ಜನಾಂಗ ಇಂತಹ ಚಟುವಟಿಕೆಗಳಿಗೆ ಬಲಿಯಾಗದಂತೆ ವ್ಯಸನಗಳಿಂದ ಮುಕ್ತರಾಗಬೇಕು ಎಂದು ಉಪನ್ಯಾಸಕ ರತ್ನಾಕರ ನಾಯ್ಕ ಹೇಳಿದರು.

ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಕಾರ್ಯಕ್ರಮದ ನಿಮಿತ್ತ ಏರ್ಪಡಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಸಿದ್ದಾಪುರ ಸ.ಪ.ಪೂ.ಕಾಲೇಜು ವಿದ್ಯಾರ್ಥಿಗಳ ಪ್ರಾಥನೆ, ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಗ್ರೇಡ್ 2 ತಹಶೀಲ್ದಾರ್ ಎಲ್ ಶ್ಯಾಮಸುಂದರ ಸ್ವಾಗತಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಡಾ|| ಮಹಾಂತ ಶಿವಯೋಗಿ ದಿನಾಚರಣೆ ಉದ್ಘಾಟಿಸಿ ಪುಷ್ಪ ನಮನ ಸಲ್ಲಿಸಿದರು. ತಹಶೀಲ್ದಾರ್ ಎಂ .ಆರ್. ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಪರಮೇಶ್ವರಯ್ಯ ಕಾನಳ್ಳಿ ಮಠ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಪಣ ತೊಡೋಣ ಎಂದು ತಿಳಿಸಿದರು. ಪ್ರಮುಖರುಗಳಾದ ಸಿ. ಎಸ್. ಗೌಡರ್, ಪಿ.ಬಿ ಹೊಸೂರು ಹಾಗೂ ವಿವಿಧ ಇಲಾಖೆಯ ಮುಖ್ಯಸ್ಥರು. ಸಿಬ್ಬಂದಿಗಳು, ಕಂದಾಯ ಇಲಾಖೆಯ ಶಿರಸ್ತೇದಾರರು ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ವಿದ್ಯಾರ್ಥಿಗಳು ಕಾರ್ಯ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಿರಸ್ತಿದಾರ ಚಂದನ ಮೂರ್ತಿ ವಂದಿಸಿದರು. ಗ್ರಾಮ ಆಡಳಿತ ಅಧಿಕಾರಿ ಹರೀಶ ನಾಯ್ಕ ನಿರ್ವಹಿಸಿದರು.

300x250 AD

Share This
300x250 AD
300x250 AD
300x250 AD
Back to top