ದಾಂಡೇಲಿ : ಮುಡಾ ಹಗರಣ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟು ಮೈಸೂರು ಪಾದಯಾತ್ರೆಯಲ್ಲಿ ದಾಂಡೇಲಿಯಿಂದ ತಾಲೂಕು ಬಿಜೆಪಿ ಅಧ್ಯಕ್ಷರಾದ ಬುಧವಂತ ಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಬಿಜೆಪಿ ಪಕ್ಷದ ದಾಂಡೇಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಗಿರೀಶ್ ಟೋಸೂರ್, ಬಿಜೆಪಿ ಮುಖಂಡರುಗಳಾದ ಪ್ರಶಾಂತ ಬಸೂರ್ತೆಕರ, ಮಿಥುನ್ ನಾಯಕ, ಬಸವರಾಜ್ ಹುಂಡೇಕರ್, ಸಂತೋಷ್ ಬುಲುಬುಲೆ ಹಾಗೂ ಪಕ್ಷದ ಕಾರ್ಯಕರ್ತರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ.