ಯಲ್ಲಾಪುರ: ರಾಜ್ಯ ಕಾಂಗ್ರೆಸ್ ಸರಕಾರದ ಹಗರಣಗಳ ವಿರುದ್ಧ ಬೆಂಗಳೂರಿನಿಂದ ಮೈಸೂರು ವರೆಗೆ ಬಿಜೆಪಿ ಜೆಡಿಎಸ್ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಯಲ್ಲಾಪುರ ಬಿಜೆಪಿ ಕಾರ್ಯಕರ್ತರು ಹೆಜ್ಜೆಹಾಕಿ ಕೈ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಪ್ರಮುಖರಾದ ಸೋಮೇಶ್ವರ ನಾಯ್ಕ,ರಜತ್ ಬದ್ದಿ, ಗಣಪತಿ ಬೋಳಗುಡ್ಡೆ ಸೇರಿದಂತೆ 61 ಕಾರ್ಯಕರ್ತರು ಭಾಗವಹಿಸಿದ್ದರು.