ಶಿರಸಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಶಿರಸಿ ವತಿಯಿಂದ ತಾಲೂಕು ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯನ್ನು ಲಯನ್ಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ಆ.2, ಶುಕ್ರವಾರದಂದು ನಡೆಸಲಾಯಿತು.
ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಿ.ವಿ.ಗಣೇಶ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಯ ಪ್ರಾಚಾರ‍್ಯರಾದ ಶಶಾಂಕ್ ಹೆಗಡೆ ಸಾಂಕೇತಿಕವಾಗಿ ಸ್ಪರ್ಧೆಯನ್ನು ಉದ್ಘಾಟಿಸಿ ಎಲ್ಲರಿಗೂ ಶುಭ ಕೋರಿದರು. ಶಿರಸಿ ತಾಲೂಕಿನ ಅನೇಕ ಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಇಸಳೂರಿನ ಶ್ರೀನಿಕೇತನ ಶಾಲೆಯ ಸ್ಕೌಟ್ಸ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ ಗೈಡ್ಸ್ ವಿದ್ಯಾರ್ಥಿನಿಯರು ಸಮಾಧಾನಕರ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು.
ಮಧ್ಯಾಹ್ನ ನಡೆದ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಲಯನ್ ಅಶ್ವತ್ ಹೆಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಮುಖ್ಯ ಆಯುಕ್ತರಾದ ವಿ.ಹೆಚ್ ಭಟ್ಕಳ್, ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಪಾದ ರಾಯ್ಸದ್, ಲಯನ್ಸ್ ಶಿಕ್ಷಣ ಸಂಸ್ಥೆಯ ಪ್ರಾಚಾರ‍್ಯರಾದ ಶಶಾಂಕ್ ಹೆಗಡೆ, ಕಾರ್ಯದರ್ಶಿ ಎನ್.ಎಸ್. ಭಾಗ್ವತ್, ಎ.ಎಸ್.ಓ. ಸಿ. ವೀರೇಶ್ ಮಾದರ್ , ನಿರ್ಣಾಯಕರುಗಳಾದ ಶ್ರೀಮತಿ ಗೀತಾ ಹೆಗಡೆ ಮುಂಡ್ಗೇಸರ, ಉಮಾಕಾಂತ್ ಹೆಗಡೆ, ನರಹರಿ ಭಂಡಾರ‍್ಕರ್ ಉಪಸ್ಥಿತರಿದ್ದರು. ಭಾಗವಹಿಸಿದ್ದ ಎಲ್ಲ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಗೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಲಯನ್ ಅಶೋಕ್ ಹೆಗಡೆ ಸ್ಮರಣಿಕೆ ನೀಡಿದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀನಿಕೇತನ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.