ದಾಂಡೇಲಿ : ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಸ್ಪರ್ಧೆಗೆ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ಒಟ್ಟು ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಮಧುರ್ ಮಾಸಲೆಕರ ಈತನು 17 ವರ್ಷದೊಳಗಿನ ಬಾಲಕರ ವಿಭಾಗದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇದೇ ವಿಭಾಗದಲ್ಲಿ ವಿದ್ಯಾರ್ಥಿ ಶಿವಾನಂದ ಪನಿಗಟ್ಟಿ ಈತನು ಅತ್ಯುತ್ತಮ ಪ್ರದರ್ಶನವನ್ನು ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
14 ವರ್ಷದೊಳಗಿನ ಬಾಲಕರ ವಿಭಾಗದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಅನಿಕೇತ್ ಚಟ್ಟರಗಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗಳ ಸಾಧನೆಗೆ ಜನತಾ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೀಟಾ ಡಯಾಸ್, ಶಾಲಾ ಮುಖ್ಯೋಪಾಧ್ಯಾಯರಾದ ಎಂ.ಬಿ.ಅರವಳ್ಳಿ, ದೈಹಿಕ ಶಿಕ್ಷಣ ಶಿಕ್ಷಕಿ ವೀಣಾ ಪ್ರಕಾಶ ಮೇಹ್ತಾ ಅವರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.