ದಾಂಡೇಲಿ : ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಇಳಿಮುಖ ಕಂಡಿದೆ. ಶಾಲೆಗಳು ಹಾಗೂ ಕಾಲೇಜುಗಳು ಮತ್ತೆ ಪುನರಾರಂಭಗೊಂಡಿದೆ. ಶಾಲೆಗಳಲ್ಲಿ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ತಕ್ಕಮಟ್ಟಿಗೆ ಚಾಲನೆ ದೊರೆತಿದೆ.
ಸ್ವಾತಂತ್ರ್ಯ ದಿನಾಚರಣೆಯ ನಂತರದ ದಿನಗಳಲ್ಲಿ ಕ್ರೀಡಾಕೂಟಗಳಿಗೆ ಚಾಲನೆ ಸಿಗಲಿದೆ. ಹಾಗಾಗಿ ವಿದ್ಯಾರ್ಥಿಗಳನ್ನು ಕ್ರೀಡಾಕೂಟಕ್ಕೆ ಈಗಿನಿಂದಲೇ ಸನ್ನದ್ಧರಾಗಿಸುವ ನಿಟ್ಟಿನಲ್ಲಿ ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯು ಈಗಲೇ ಕಾರ್ಯಪ್ರವೃತವಾಗಿದೆ. ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ಲಾರೆಟ್ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾರಾಮ ನಾಯ್ಕ ಅವರ ನೇತೃತ್ವದಲ್ಲಿ ಶಾಲೆಯ ಆಯ್ದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಪ್ರತಿದಿನ ತರಬೇತಿ ಮಾರ್ಗದರ್ಶನವನ್ನು ಹಾಗೂ ಕ್ರೀಡಾಭ್ಯಾಸವನ್ನು ಮಾಡಲಾಗುತ್ತದೆ. ಒಟ್ಟಿನಲ್ಲಿ ಈ ಬಾರಿಯ ಕ್ರೀಡಾ ಸ್ಪರ್ಧೆಗಳಲ್ಲಿ ಹೆಚ್ಚಿನ ಬಹುಮಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆ ವಿದ್ಯಾರ್ಥಿಗಳನ್ನು ಅಣಿಗೊಳಿಸಲು ಮುಂದಾಗಿದೆ.