ದಾಂಡೇಲಿ : ರಾತ್ರಿ ಸಂಚರಿಸುವ ಖಾಸಗಿ ಬಸ್ಸುಗಳಲ್ಲಿ ಸಿಸಿ ಟಿವಿ ಅಳವಡಿಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮಹಿಳಾ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ದೂರದ ಊರುಗಳಿಂದ ರಾತ್ರಿ ಸಮಯದಲ್ಲಿ ಬರುವ ಸಾರಿಗೆ ಬಸ್ಸುಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಅಗತ್ಯ ಕ್ರಮವನ್ನು ಕೈಗೊಳ್ಳುವ ಬಗ್ಗೆ ಗುರುವಾರ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಮನವಿಯನ್ನು ಮಾಡಲಾಗಿತ್ತು. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಾರಿಗೆ ಸಚಿವರು, ಈ ಬಗ್ಗೆ ಸಾರ್ವಜನಿಕರಿಂದ ಒಂದು ಮನವಿ ಪತ್ರವನ್ನು ಕಳುಹಿಸಿದ್ದಲ್ಲಿ, ತಕ್ಷಣದಲ್ಲೇ ರಾತ್ರಿ ಸಂಚರಿಸುವ ಖಾಸಗಿ ಸಾರಿಗೆ ಬಸ್ಸುಗಳಿಗೆ ಸಿಸಿ ಟಿವಿ ಕಡ್ಡಾಯವಾಗಿ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಆದೇಶವನ್ನು ಮಾಡಲಾಗುವುದು ಎಂದು ತಿಳಿಸಿದರು.