ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯುರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯೋಮಿತಿಯ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಕಾಡೆಮಿ ವೆಬ್‌ಸೈಟ್: http://karnatakasahithyaacademy.org ಮೂಲಕ ಪಡೆಯಬಹುದು ಎಂದು ರಿಜಿಸ್ಟಾçರ್ ಪ್ರಕಟಣೆ ತಿಳಿಸಿದೆ.