ಕಾರವಾರ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು.
28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.