ದಾಂಡೇಲಿ : ಅಂತರರಾಷ್ಟ್ರೀಯ ಯುವ ದಿನಾಚರಣೆಯ ಹಿನ್ನಲೆಯಲ್ಲಿ ನಗರದ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಡಿ ರೋಟರಿ ಶಾಲೆಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡದಂತೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ತಂಬಾಕು ಸೇವನೆಯಿಂದಾಗುವ ಅಪಾಯಕಾರಿ ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನದಾಫ್, ರೋಟರಿ ಕ್ಲಬ್ ಅಧ್ಯಕ್ಷ ರಾಹುಲ್ ಬಾವಾಜಿ, ಕಾರ್ಯದರ್ಶಿ ಅಶುತೋಷ್ ಕುಮಾರ್ ರಾಯ್, ಕೋಶಾಧಿಕಾರಿ ಲಿಯೋ ರಫೆಲ್ ಪಿಂಟೋ, ರೋಟರಿ ಪ್ರಮುಖರಾದ ಸೋಮಕುಮಾರ್, ರೋಟರಿ ಶಾಲೆಯ ಶಿಕ್ಷಕ ವೃಂದ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.