ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿಯ ನಾಲ್ಕು ವಿದ್ಯಾರ್ಥಿಗಳಿಗೆ ತಾಲ್ಲೂಕು ಆಡಳಿತದ ವತಿಯಿಂದ ಮಣಕಿ ಮೈದಾನದಲ್ಲಿ ೭೮ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ತಾಲ್ಲೂಕಿಗೆ ಕೀರ್ತಿಯನ್ನು ತಂದುಕೊಟ್ಟಿರುವುದಕ್ಕೆ ಸನ್ಮಾನಿಸಲಾಯಿತು.
ವಿಜ್ಞಾನ ವಿಭಾಗದ ಕು. ಶ್ರಾವ್ಯ ಭಟ್ಟ ರಾಜ್ಯಕ್ಕೆ 5 ನೇ ಸ್ಥಾನ, ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯನ್ನು ಒಳಗೊಂಡ ಸಮಗ್ರ ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಹಾಗೂ ಕುಮಟಾ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ತಾಲ್ಲೂಕು ಆಡಳಿತದಿಂದ ಸನ್ಮಾನಿಸಲ್ಪಟ್ಟಳು. ಹಾಗೆಯೇ ಕು. ಶ್ರೀಕೃಷ್ಣ ಶಾನಭಾಗ ಮತ್ತು ಕು. ತಿಲಕ್ ಕುಮಟಾ ರಾಜ್ಯಕ್ಕೆ ಹತ್ತನೆಯ ಸ್ಥಾನ ಗಳಿಸಿದ್ದಕ್ಕಾಗಿ ಸನ್ಮಾನಿಸಲ್ಪಟ್ಟರು. ವಾಣಿಜ್ಯ ವಿಭಾಗದ ಕು. ಅಕ್ಷತಾ ಶಾನಭಾಗ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಗಳಿಸಿದ್ದಕ್ಕಾಗಿ ಸನ್ಮಾನಿಸಲ್ಪಟ್ಟರು.
ನಮ್ಮ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಮಕ್ಕಳಿಗೆ ಸನ್ಮಾನಿಸದಕ್ಕಾಗಿ ತಾಲ್ಲೂಕು ಆಡಳಿತದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಹಾಗೂ ತಾಲ್ಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಪರವಾಗಿ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು ಧನ್ಯವಾದ ತಿಳಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.