ಕಾರವಾರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಉತ್ತರ ಕನ್ನಡ ಜಿಲ್ಲೆಗೆ ಆ. 20 ರಂದು ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲೆಯ ಕುಮಟಾ ತಾಲ್ಲೂಕಿನ ನಾಡಮಾಸ್ಕೇರಿ ಮತ್ತು ಅನ್ನೇಹಳ್ಳಿ ಗ್ರಾಮ ಪಂಚಾಯತಿಗಳು, ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 3.30 ಗಂಟೆಯಿಂದ 5 ಗಂಟೆಯವರೆಗೆ ಕುಮಟಾ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆ.21 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿಗಳು ಶಾಲೆ ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೋಮಾ, ಕಾಲೇಜುಗಳು, ಅಂಗನವಾಡಿ, ಪೋಲಿಸ್ ಠಾಣೆ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಯಿಂದ 5 ಗಂಟೆಯವರೆಗೆ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ,