ಸಿದ್ದಾಪುರ: ತಾಲೂಕಿನ ಭತ್ತ ಬೆಳೆದ ರೈತರಿಂದ 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಂತ ಜಮೀನು ಹೊಂದಿರುವುದರೊಂದಿಗೆ ಬೇಸಾಯದಲ್ಲಿ ತೊಡಗಿರುವವರಾಗಿರಬೇಕು. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಅರ್ಜಿಸಲ್ಲಿಸಲು ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ ಕೊಂಡ್ಲಿ, ಕೋಡ್ಕಣಿ ಹಾಗೂ ಹೇರೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಸುಮಾ ಎಸ್.ಎಂ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.