Slide
Slide
Slide
previous arrow
next arrow

ಮಹಾನ್ ವ್ಯಕ್ತಿಗಳ ಆದರ್ಶ ಸಮಾಜಕ್ಕೆ ಸದಾ ದಾರಿದೀಪ : ಸಚಿವ ಮಂಕಾಳ ವೈದ್ಯ

300x250 AD

ಕಾರವಾರ: ಸಾಮಾಜಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಸಮಾಜದಲ್ಲಿ ಮಾಡಿದ ಕ್ರಾಂತಿಕಾರಿ ಬದಲಾವಣೆಗಳು ಹಾಗೂ ಯೋಜನೆಗಳು, ಹಿಂದುಳಿದ ಮತ್ತು ಜನ ಸಾಮಾನ್ಯರ ಬದುಕಿಗೆ ಸದಾ ದಾರಿದೀಪವಾಗಿದ್ದು, ಅವರ ಬದುಕಿನಲ್ಲಿ ನೆಮ್ಮದಿ ಮೂಡಿಸಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಅವರು ಮಂಗಳವಾರ ಕುಮಟಾ ತಾಲೂಕಿನ ದೀವಗಿಯ ಹಾಲಕ್ಕಿ ಒಕ್ಕಲಿಗರ ಭವನದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉತ್ತರ ಕನ್ನಡ, ನಾಮಧಾರಿ ಸಂಘ ಕುಮಟಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಡಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶೋಷಿತರು ಹಿಂದುಳಿದವರು ಮತ್ತು ಬಡಜನರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದ ಅರಸುರವರು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅನುಕೂಲಕ್ಕಾಗಿ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಹಾಗೂ ವಿದ್ಯಾರ್ಥಿ ವೇತನ ನೀಡುವ ಮೂಲಕ ಅವರ ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದರು. ಸಮಾನತೆಯ ಹರಿಕಾರ ಎಂದು ಕರೆಯಲ್ಪಡುವ ಅವರು, ಗೇಣಿ ಪದ್ಧತಿಯ ನಿರ್ಮೂಲನೆ ಮಾಡುವ ಮೂಲಕ ಉಳುವವನಿಗೂ ಭೂ ಒಡೆತನ ನೀಡುವ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ಸಮಾಜದ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದು, ವೃದ್ಧಾಪ್ಯ ವೇತನ, ವಿಧವಾ ವೇತನ ಮುಂತಾದ ಜನಹಿತ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು ಎಂದರು
ಅರಸುರವರ ಚಿಂತನೆಗಳು ಮತ್ತು ಜಾರಿಗೆ ಯೋಜನೆಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು ನಮ್ಮ ಸರ್ಕಾರ ಕೂಡಾ ಅವರ ಆಲೋಚನೆಯ ಹಾದಿಯಲ್ಲಿಯೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯಲ್ಲಿ ಕೂಡ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದು, ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಅಂಗನವಾಡಿಗಳ ಸಂಪೂರ್ಣ ಬಲವರ್ಧನೆಗೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತಿ ಧರ್ಮದ ಭೇದ ತೊರೆದು ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ್ದು, ಎಲ್ಲರಿಗೂ ಸಮನತೆಯ ಹಕ್ಕು ದೊರೆಯಬೇಕು ಎಂಬ ಉದ್ದೇಶದಿಂದ 165 ಕ್ಕೂ ಹೆಚ್ಚು ದೇವಾಲಯಗಳನ್ನು ಕಟ್ಟಿ ಎಲ್ಲಾ ಜಾತಿ ಧರ್ಮದವರಿಗೂ ದೇವಾಲಯ ಪ್ರವೇಶಕ್ಕೆ ಮುಕ್ತ ಪ್ರವೇಶ ಕಲ್ಪಿಸಿದ್ದರು. ಹಲವು ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಟ ನಡೆಸಿದ್ದ ಅವರು ಮಹಿಳೆಯರಿಗೆ ಹಕ್ಕು ಮತ್ತು ಸ್ವಾತಂತ್ರö್ಯ ದೊರಕಿಸಲು ಪ್ರಯತ್ನಿಸಿದ್ದರು. ಅವರು ತೋರಿದ ಮಾರ್ಗದಲ್ಲಿ ಪ್ರತಿಯೊಬ್ಬರೂ ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ್, ಶಾಂತಾರಾಮ ಸಿದ್ದಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ್ ಸ್ವಾಗತಿಸಿದರು, ವೀಣಾ ವಂದಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಡಿ.ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಾಂಗ ಮಾಡಿ, ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು

300x250 AD
Share This
300x250 AD
300x250 AD
300x250 AD
Back to top