Slide
Slide
Slide
previous arrow
next arrow

ವಿದ್ಯಾವಾಚಸ್ಪತಿ ಕೆರೇಕೈರಿಗೆ ಕಿರಿಕ್ಕಾಡು ಪ್ರಶಸ್ತಿ

300x250 AD

ಶಿರಸಿ: ಎಂಭತ್ತರ ಸಂಭ್ರಮದಲ್ಲಿರುವ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸಂಸ್ಥಾಪಕಧ್ಯಕ್ಷ, ಯಕ್ಷಗಾನ ಗುರುಕುಲದ ರೂವಾರಿ ಕವಿ, ಅರ್ಥಧಾರಿ, ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣೆಯೊಂದಿಗೆ ನೀಡಲಾಗುತ್ತಿರುವ 2024 ರ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಯನ್ನು ವಿದ್ಯಾವಾಚಸ್ಪತಿ ಕೆರೇಕೈ ಉಮಾಕಾಂತ ಭಟ್ಟರಿಗೆ ಪ್ರಕಟಿಸಲಾಗಿದೆ.

ಉಮಾಕಾಂತ ಭಟ್ಟರು ಖ್ಯಾತ ಯಕ್ಷಗಾನ ಅರ್ಥಧಾರಿಯಾಗಿ, ಪ್ರವಚನಕಾರರಾಗಿ, ಉಪನ್ಯಾಸಕರಾಗಿ, ಕವಿಯಾಗಿ ನಾಡಿನ ಉದ್ದಗಲಗಳಲ್ಲೂ ಪ್ರಸಿದ್ಧರಾದವರಾಗಿದ್ದಲ್ಲದೇ ನ್ಯಾಯಶಾಸ್ತ್ರ ಪಂಡಿತರಾಗಿ, ಪ್ರಾಚಾರ್ಯರಾಗಿ ಮೇಲುಕೋಟೆಯ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿದವರು. ಭಟ್ಟರು ಬಹುಮಾನ್ಯರು ಮತ್ತು ಬಹುಶ್ರುತ ವಿದ್ವಾಂಸರು‌ ಆಗಿದ್ದಾರೆ.
ಆಗಸ್ಟ್ 31ರಂದು ಪುತ್ತೂರಿನ ಬೇಲಂಪಾಡಿಯಲ್ಲಿ ದಿನಪೂರ್ತಿ ನಡೆಯಲಿರುವ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಎಂಭತ್ತರ ಸಂಭ್ರಮದ ಕಲೋತ್ಸವದಲ್ಲಿ ಪ್ರೊ‌. ಶ್ರೀಪತಿ ಕಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ, ಶಾಸಕಿ ಭಾಗೀರಥಿ ಮುರುಳ್ಯ ಅವರ ಉಪಸ್ಥಿತಿಯೊಂದಿಗೆ ಕೀರಿಕ್ಕಾಡು ಪ್ರಶಸ್ತಿಯನ್ನು ನೀಡಿ ಕೆರೇಕೈ ಅವರನ್ನು ಗೌರವಿಸಲಾಗುತ್ತಿದೆ ಎಂದು ಕಲಾ ಸಂಘದ ಅಧ್ಯಕ್ಷ ಡಾ.ರಮಾನಂದ ಬನಾರಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top