Slide
Slide
Slide
previous arrow
next arrow

ಗೆಜೆಡೆಟ್ ಪ್ರೊಬೇಷನರ್ಸ್ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಲಕ್ಷ್ಮಿಪ್ರಿಯಾ

300x250 AD

ಕಾರವಾರ: ಜಿಲ್ಲೆಯಲ್ಲಿ ಆಗಸ್ಟ್ 27 ರಂದು ನಡೆಯುವ 2023-24 ನೇ ಸಾಲಿನ ಗೆಜೆಡೆಟ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗೆಜೆಡೆಟ್ ಪ್ರೊಬೇಷನರ್ಸ್ ಹುದ್ದೆಗಳ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೆಜೆಡೆಟ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯು ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಒಟ್ಟು 4324 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜಾಮರ್ ಅಳವಡಿಕೆಯನ್ನು ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬಾರದೇ ಅತ್ಯಂತ ಪಾರದರ್ಶಕ ರೀತಿಯಲ್ಲಿ ಪರೀಕ್ಷೆಗಳು ನಡೆಯುವಂತೆ, ಈಗಾಗಲೇ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ತಮಗೆ ವಹಿಸಿರುವ ಕರ್ತವ್ಯಗಳನ್ನು ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ನಿರ್ವಹಿಸುವಂತೆ ತಿಳಿಸಿದರು.
ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳಿಗೆ ಸೂಚಿಸಿರುವ ವಸ್ತçಸಂಹಿತೆ ಪಾಲನೆ ಬಗ್ಗೆ ಪರೀಕ್ಷಿಸಿ, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ರಾö್ಟçನಿಕ್ ವಸ್ತುಗಳನ್ನು ಕೊಠಡಿಗೆ ತೆಗೆದುಕೊಂಡು ಬಾರದಂತೆ ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಹಾಗೂ ಎಲ್ಲಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಪರೀಕ್ಷಾ ದಿನದಂದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯಿಂದ ಅಭ್ಯರ್ಥಿಗಳಿಗೆ ತೊಂದರೆಯಾಗದAತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡುವಂತೆ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳುವಂತೆ ಹೆಸ್ಕಾಂ ಇಲಾಖೆಗೆ ಮತ್ತು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಅಗತ್ಯ ಚಿಕಿತ್ಸೆ ನೀಡಲು ಮುನ್ನೆಚ್ಚರಿಕೆಯಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಕಿರಿಯ ಮಹಿಳಾ ಆರೋಗ್ಯ ಸಹಾಯಕರನ್ನು ನಿಯೋಜಿಸುವಂತೆ ಡಿ.ಹೆಚ್.ಓ ಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಹಾಗೂ ಪ್ರಶ್ನೆ ಪತ್ರಿಕೆಗಳ ಸಾಗಾಟ ಸಂದರ್ಭದಲ್ಲಿ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ಸಂದರ್ಭದಲ್ಲಿ ವಾಹನಗಳಿಗೆ ಭದ್ರತೆ ಒದಗಿಸುವುದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಗೆಜೆಡೆಟ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯು ದೋಷ ರಹಿತವಾಗಿ, ಸುಗಮವಾಗಿ ಮತ್ತು ಅತ್ಯಂತ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top